Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:10 - ಕನ್ನಡ ಸತ್ಯವೇದವು J.V. (BSI)

10 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನೀವೆಲ್ಲರು ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿಗೆ ಕರೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಆ ದಿವಸಗಳಲ್ಲಿ ಜನರು ತಮ್ಮ ಸ್ನೇಹಿತರೊಂದಿಗೆ ಕುಳಿತುಕೊಂಡು ಸಂಭಾಷಿಸುವರು. ಅಂಜೂರದ ಮರದ ನೆರಳಿನಲ್ಲಿಯೂ ದ್ರಾಕ್ಷಿತೋಟಗಳ ನೆರಳಿನಲ್ಲಿಯೂ ಕುಳಿತುಕೊಂಡು ಮಾತನಾಡಲು ಪರಸ್ಪರ ಆಮಂತ್ರಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಆ ದಿವಸದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷಿಬಳ್ಳಿಯ ಕೆಳಗೂ, ಅಂಜೂರದ ಮರದ ಕೆಳಗೂ ಕರೆಯುವಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:10
9 ತಿಳಿವುಗಳ ಹೋಲಿಕೆ  

ಸೊಲೊಮೋನನ ಆಳಿಕೆಯಲ್ಲೆಲ್ಲಾ ದಾನ್‍ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲ್ಯರೂ ಯೆಹೂದ್ಯರೂ ತಮ್ಮತಮ್ಮ ದ್ರಾಕ್ಷಾಲತೆ ಅಂಜೂರಗಿಡ ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷಾಲತೆ, ಅಂಜೂರಗಿಡ, ಇವುಗಳ ನೆರಳಿನಲ್ಲಿ ಕೂತುಕೊಳ್ಳುವನು; ಅವರನ್ನು ಯಾರೂ ಹೆದರಿಸರು; ಸೇನಾಧೀಶ್ವರನಾದ ಯೆಹೋವನ ಬಾಯೇ ಇದನ್ನು ನುಡಿದಿದೆ.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ನನ್ನ ಜನರು ಸಮಾಧಾನನಿವಾಸದಲ್ಲಿಯೂ ನಿರ್ಭಯನಿಲಯಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.


ಈ ದೇಶದಲ್ಲಿ ಜನರು ಮನೆಹೊಲತೋಟಗಳನ್ನು ಮತ್ತೆ ಕೊಳ್ಳುವರು, ಕೊಡುವರು. ಇದು ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ ಎಂದು ಖಂಡಿತವಾಗಿ ಹೇಳಿದೆನು.


ಯೆಹೋವನು ನನ್ನ ತಂದೆಯಾದ ದಾವೀದನಿಗೆ - ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು