ಜೆಕರ್ಯ 3:2 - ಕನ್ನಡ ಸತ್ಯವೇದವು J.V. (BSI)2 ಆಗ ಯೆಹೋವನ ದೂತನು ಸೈತಾನನಿಗೆ - ಸೈತಾನನೇ, ಯೆಹೋವನು ನಿನ್ನನ್ನು ಖಂಡಿಸಲಿ, ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಯೆಹೋವನ ದೂತನು ಹೇಳಿದ್ದೇನೆಂದರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು. ಅಧ್ಯಾಯವನ್ನು ನೋಡಿ |