Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:8 - ಕನ್ನಡ ಸತ್ಯವೇದವು J.V. (BSI)

8 ಮಹಾಯಾಜಕನಾದ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಹಕಾರಿಗಳೂ ಕೇಳಿರಿ; ಇಗೋ, ಮೊಳಿಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೇನೆಂಬದಕ್ಕೆ ಇವರೇ ಮುಂಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಕೇಳಿರಿ. ಇಗೋ, ಮೊಳಕೆ ಎಂಬ ನನ್ನ ಸೇವಕನನ್ನು ಹೊರಡಿಸುತ್ತೆನೆಂಬುದಕ್ಕೆ ಇವರೇ ಮುಂಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರಧಾನ ಯಾಜಕನಾದ ಯೆಹೋಶುವನೇ, ಅವನೊಂದಿಗೆ ಸೇವೆಮಾಡುವ ಇತರ ಯಾಜಕರೇ, ನನ್ನ ಮಾತಿಗೆ ಕಿವಿಗೊಡಿರಿ. ಈ ಗಂಡಸರು ಮುಂದೆ ಏನಾಗಬಹುದೆಂಬುದಕ್ಕೆ ನಿದರ್ಶನವಾಗಿದ್ದಾರೆ. ಆಗ ನಾನು ನನ್ನ ವಿಶೇಷ ಸೇವಕನನ್ನು ಕರೆತರುವೆನು. ಆತನ ಹೆಸರು ಕೊಂಬೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:8
24 ತಿಳಿವುಗಳ ಹೋಲಿಕೆ  

ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು;


ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಒಣನೆಲದೊಳಗೆ ಬೇರಿನಿಂದ ಹೊರಡುವ ಅಂಕುರದಂತೆಯೂ ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಆಗ ಯೆಹೋವನು ಹೀಗೆ ಹೇಳಿದನು - ನನ್ನ ಸೇವಕನಾದ ಯೆಶಾಯನು ಐಗುಪ್ತದ ಮತ್ತು ಕೂಷಿನ ನಾಶನಕ್ಕೆ ಸೋಜಿಗದ ಗುರುತಾಗಿ ಮೂರು ವರುಷ ಬಟ್ಟೆ ಕೆರಗಳಿಲ್ಲದೆ ನಡೆದ ಪ್ರಕಾರ


ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು.


ಇದನ್ನೂ ನುಡಿ - ನಾನು ನಿಮಗೆ ಮುಂಗುರುತಾಗಿದ್ದೇನೆ; ನಾನು ಮಾಡಿದಂತೆಯೇ ಅವರಿಗಾಗುವದು; ಅವರು ವಲಸೆಯಾಗಿ ಸೆರೆಹೋಗುವರು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು; ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ಆಹಾ, ನಾನು ಯೆಹೋವನ ದೃಷ್ಟಿಯಲ್ಲಿ ಮಾನ್ಯನು, ನನ್ನ ದೇವರೇ ನನಗೆ ಬಲವು. ಯಾಕೋಬನ್ನು ತನಗೆ ಸೇರಿಸಿಕೊಳ್ಳಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಬರಬೇಕೆಂತಲೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನಲ್ಲವೆ.


ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.


ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡದು, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.


[ಯೆಹೋವನ ಈ ಮಾತನ್ನು ಕೇಳಿರಿ -] ಈ ವಿಷಯದಲ್ಲಿ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು, ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಆತನು ನನಗೆ - ನೀನು ನನ್ನ ಸೇವಕನೂ ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.


ಅನೇಕರು ನನ್ನ ದುಃಸ್ಥಿತಿಗೆ ಬೆರಗಾಗುತ್ತಾರೆ; ಆದರೂ ನೀನು ನನಗೆ ಬಲವಾದ ಆಶ್ರಯಸ್ಥಾನವಾಗಿರುತ್ತೀ.


ಅವರ ಕಣ್ಣ ಮುಂದೆ ಅದನ್ನು ಹೆಗಲ ಮೇಲೆ ಹಾಕಿ ಕತ್ತಲಲ್ಲಿ ಹೊತ್ತುಕೊಂಡು ಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು