Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 3:9 - ಕನ್ನಡ ಸತ್ಯವೇದವು J.V. (BSI)

9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ, ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ; ಒಂದೇ ದಿನದೊಳಗೆ ದೇಶದ ಪಾಪವನ್ನು ಪರಿಹರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೋಡು, ನಾನು ಯೆಹೋಶುವನ ಮುಂದೆ ಒಂದು ವಿಶೇಷ ಕಲ್ಲನ್ನಿಡುವೆನು. ಆ ಕಲ್ಲಿನಲ್ಲಿ ಏಳು ಬದಿಗಳಿವೆ. ನಾನು ಆ ವಿಶೇಷ ಕಲ್ಲಿನ ಮೇಲೆ ವಿಶೇಷ ಸಂದೇಶವನ್ನು ಕೆತ್ತುವೆನು. ನಾನು ಆ ದೇಶದ ಪಾಪವನ್ನು ಒಂದು ದಿವಸದಲ್ಲಿ ತೆಗೆದುಹಾಕುವೆನೆಂದು ಅದು ತೋರಿಸುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಆ ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವಂತೆ ನಾನು ಅದರ ಮೇಲೆ ಒಂದು ಶಾಸನವನ್ನು ಕೆತ್ತಿಸುವೆನು. ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆ ದೇಶದ ಅಪರಾಧವನ್ನು ಒಂದೇ ದಿವಸದಲ್ಲಿ ತೊಲಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 3:9
34 ತಿಳಿವುಗಳ ಹೋಲಿಕೆ  

ಈ [ದೀಪಗಳಿಂದ ಸೂಚಿತವಾದ] ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವದನ್ನು ಸಂತೋಷದಿಂದ ನೋಡುತ್ತವೆ; ಹೀಗಿರುವಲ್ಲಿ ಅಲ್ಪಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಾರು?


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.


ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ - ಇಗೋ, ಪರೀಕ್ಷಿತವಾಗಿಯೂ ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು;


ಇಗೋ, ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದಿಲ್ಲವೆಂತಲೂ ಶಾಸ್ತ್ರದಲ್ಲಿ ಬರೆದದೆಯಲ್ಲಾ. ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪಪರಿಹಾರಕ್ಕಾಗಿ ಸಮರ್ಪಣೆಮಾಡುವ ಲೇವಿಕ ಮಹಾಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸಬೇಕಾದ ಅವಶ್ಯವಿಲ್ಲ. ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಆತನು ನಮ್ಮ ಮೇಲೆ ಮುದ್ರೆ ಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಕ್ರಿಸ್ತನು ನಮ್ಮ ಕೈಯಿಂದ ಬರಸಿಕೊಟ್ಟ ಪತ್ರವಾಗಿದ್ದೀರೆಂಬದು ಪ್ರತ್ಯಕ್ಷವಾಗಿಯೇ ಇದೆ; ಅದು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆದದ್ದು; ಕಲ್ಲಿನ ಮೇಲೆಯಲ್ಲ, ಮನುಷ್ಯ ಹೃದಯಗಳೆಂಬ ಹಲಿಗೆಗಳ ಮೇಲೆ ಬರೆದದ್ದು.


ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ದೇವದೂತನು ತನ್ನ ಸೇವಕರಿಗೆ - ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ ಎಂದು ಅಪ್ಪಣೆಕೊಟ್ಟು ಅವನಿಗೆ - ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರಗಳನ್ನು ತೊಡಿಸುವೆನು ಎಂದು ಹೇಳಿದನು.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಚೊಕ್ಕಬಂಗಾರದ ಪಟ್ಟವನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಾಗಿ ಅದರಲ್ಲಿ ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಕೆತ್ತಿಸಬೇಕು.


ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಮುದ್ರಾರತ್ನವನ್ನು ಕೆತ್ತುವ ರೀತಿಯಲ್ಲಿ ಆ ಎರಡು ರತ್ನಗಳಲ್ಲಿ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.


ನನ್ನ ಒಡೆಯನೂ ಅರಸನೂ ಆದ ನಿನ್ನ ತರುವಾಯ ಸಿಂಹಾಸನದ ಮೇಲೆ ಕೂತುಕೊಳ್ಳತಕ್ಕವರಾರೆಂಬದನ್ನು ನೀನೇ ಗೊತ್ತುಮಾಡಬೇಕೆಂದು ಇಸ್ರಾಯೇಲ್ಯರೆಲ್ಲರೂ ಕಾದುಕೊಂಡಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು