Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:2 - ಕನ್ನಡ ಸತ್ಯವೇದವು J.V. (BSI)

2 ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಏನನ್ನು ನೋಡುತ್ತಿರುವೆ?” ಎಂದು ಅವನು ನನ್ನನ್ನು ಕೇಳಿದಾಗ ನಾನು, “ಇಗೋ, ಏಳು ದೀಪಗಳುಳ್ಳ ಸುವರ್ಣಮಯ ದೀಪಸ್ತಂಭವೊಂದನ್ನು ನೋಡುತ್ತಿದ್ದೇನೆ. ಅದರ ಮೇಲ್ಗಡೆ ಎಣ್ಣೆಯ ಪಾತ್ರೆ ಇದೆ. ಅದರ ಮೇಲೆ ದೀಪಗಳಿಗೆ ಏಳು ನಾಳಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:2
19 ತಿಳಿವುಗಳ ಹೋಲಿಕೆ  

ಸಿಂಹಾಸನದೊಳಗಿಂದ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಹೊರಡುತ್ತವೆ. ಅದರ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ನನ್ನ ಸಂಗಡ ಮಾತಾಡುತ್ತಿದ್ದ ಶಬ್ದವು ಯಾರದೆಂದು ನೋಡುವದಕ್ಕೆ ಹಿಂದಕ್ಕೆ ತಿರುಗಿದೆನು.


ಅವನು ನನ್ನನ್ನು - ನಿನಗೆ ಏನು ಕಾಣಿಸುತ್ತಿದೆ ಎಂದು ಕೇಳಿದ್ದಕ್ಕೆ - ಹಾರುತ್ತಿರುವ ಒಂದು ಸುರಳಿಯು ಕಾಣಿಸುತ್ತದೆ; ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದುತ್ತರ ಕೊಟ್ಟೆನು.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಗೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.


ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಮತ್ತು ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು.


ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,


ಇನ್ನು ಮುಂದೆ ಬೆಳ್ಳಿಯ ತಂತಿ ಕಿತ್ತು ಚಿನ್ನದ ಬಟ್ಟಲು ಜಜ್ಜಿಹೋಗುವದು; ಮಡಕೆ ಬುಗ್ಗೆಯ ಹತ್ತಿರ ಒಡೆಯುವದು; ಬಾವಿಯ ರಾಟೆ ಮುರಿಯುವದು;


ಆಗ ಯೆಹೋವನು ನನ್ನನ್ನು - ಯೆರೆಮೀಯನೇ, ಏನು ನೋಡುತ್ತೀ ಎಂದು ಕೇಳಲು ನಾನು - ಅಂಜೂರದ ಫಲಗಳನ್ನು ನೋಡುತ್ತೇನೆ; ಉತ್ತಮ ಫಲಗಳು ಅತ್ಯುತ್ತಮವಾಗಿವೆ; ಕೆಟ್ಟ ಫಲಗಳು ಬಹಳ ಕೆಟ್ಟಿವೆ, ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾಗಿವೆ ಎಂದು ಉತ್ತರಕೊಟ್ಟೆನು.


ಯೆಹೋವನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ನಾನು - ಒಂದು ನೂಲುಗುಂಡು ಎಂದು ಉತ್ತರಕೊಟ್ಟೆನು. ಆಗ ಕರ್ತನು - ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಹಿಡಿಯುವೆನು; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು