Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:5 - ಕನ್ನಡ ಸತ್ಯವೇದವು J.V. (BSI)

5 ಇವು ಏನೆಂದು ನಿನಗೆ ತಿಳಿಯುವದಿಲ್ಲವೋ ಎಂಬದಾಗಿ ನನ್ನನ್ನು ಪ್ರಶ್ನೆಮಾಡಲು - ಇಲ್ಲ, ಸ್ವಾಮೀ ಎಂದು ಅರಿಕೆಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ದೇವದೂತನು “ಇವು ಏನೆಂದು ನಿನಗೆ ತಿಳಿಯುವುದಿಲ್ಲವೋ?” ಎಂಬುದಾಗಿ ನನ್ನನ್ನು ಪ್ರಶ್ನೆಮಾಡಲು, “ನಾನು ಇಲ್ಲ ಸ್ವಾಮಿ” ಎಂದು ಅರಿಕೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ಆ ದೂತನು, “ಇದು ಏನೆಂದು ನಿನಗೆ ತಿಳಿಯುವುದಿಲ್ಲವೋ? ಎಂದು ಪ್ರಶ್ನಿಸಿದನು. ಅದಕ್ಕೆ ನಾನು, “ಇಲ್ಲ, ಸ್ವಾಮೀ” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ಹೀಗೆ ಹೇಳಿದನು: “ಈ ವಿಷಯಗಳು ಏನೆಂದು ನಿನಗೆ ತಿಳಿಯಲಿಲ್ಲವೇ?” ನಾನು, “ಇಲ್ಲ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರಕೊಟ್ಟು ನನಗೆ, “ಇವೇನೆಂದು ಗೊತ್ತಿಲ್ಲವೋ?” ಎಂದು ಕೇಳಿದನು. ನಾನು, “ಇಲ್ಲ, ನನ್ನ ಒಡೆಯನೇ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:5
9 ತಿಳಿವುಗಳ ಹೋಲಿಕೆ  

ಇವು ಏನೆಂದು ನಿನಗೆ ತಿಳಿಯುವದಿಲ್ಲವೋ ಎಂಬದಾಗಿ ನನ್ನನ್ನು ಕೇಳಲು - ಇಲ್ಲ, ಸ್ವಾಮೀ ಎಂದು ಅರಿಕೆಮಾಡಿದೆನು.


ಆಮೇಲೆ ಆತನು ಅವರಿಗೆ ಹೇಳಿದ್ದೇನಂದರೆ - ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ನನ್ನ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳುಕೊಂಡೀರಿ?


ನನಗೆ [ಕನಸಿನ ಅರ್ಥವನ್ನು] ವಿವರಿಸುವ ದೇವದೂತನನ್ನು - ಸ್ವಾಮೀ, ಇವರು ಯಾರು ಎಂದು ನಾನು ಕೇಳಲು ಅವನು ನನಗೆ - ಇವರು ಇಂಥವರೆಂದು ನಿನಗೆ ತೋರಿಸುವೆನು ಎಂಬದಾಗಿ ಹೇಳಿದನು.


ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂತಲ್ಲ, ಕನಸಿನ ಅಭಿಪ್ರಾಯವು ರಾಜನಿಗೆ ಗೋಚರವಾಗಿ ನಿನ್ನ ಮನಸ್ಸಿನ ಯೋಚನೆಯ ವಿಷಯವು ನಿನಗೆ ತಿಳಿದುಬರಲಿ ಎಂದು ಈ ರಹಸ್ಯವು ನನಗೆ ವ್ಯಕ್ತವಾಗಿದೆ.


ಇಂಥ ಜ್ಞಾನವು ನನಗೆ ಬಹು ಆಶ್ಚರ್ಯವಾಗಿದೆ; ಅದು ಉನ್ನತವಾದದ್ದು, ನನಗೆ ನಿಲುಕುವದಿಲ್ಲ.


ಯೋಸೇಫನು - ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನು ಕೊಡಬಲ್ಲನೆಂದು ಹೇಳಿದನು.


ಅನಂತರ ವಿವರಿಸುವ ದೇವದೂತನು ಮತ್ತೆ ಬಂದು ನಿದ್ರೆಹತ್ತಿದವನ ಹಾಗಿದ್ದ ನನ್ನನ್ನು ಎಚ್ಚರಗೊಳಿಸಿ ಏನು ನೋಡುತ್ತೀ ಎಂದು ಕೇಳಲು ನಾನು -


ಪುನಃ ನಾನು ಪ್ರಸ್ತಾಪವೆತ್ತಿ ವಿವರಿಸುವ ದೇವದೂತನನ್ನು - ಸ್ವಾಮೀ, ಇವು ಏನು ಎಂದು ಕೇಳಿದ್ದಕ್ಕೆ ಆ ದೇವದೂತನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು