Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:6 - ಕನ್ನಡ ಸತ್ಯವೇದವು J.V. (BSI)

6 ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:6
33 ತಿಳಿವುಗಳ ಹೋಲಿಕೆ  

ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದ ದೆಸೆಯಿಂದ ಸುರಕ್ಷಿತನಾಗುವದಿಲ್ಲ.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವದು; ಆಗ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು.


ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ;


ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರು ಯೆರೂಸಲೇವಿುನ ದೇವಾಲಯವನ್ನು ಕಟ್ಟಿಸುವದಕ್ಕೆ ಪ್ರಾರಂಭಿಸಿದರು; ದೇವಪ್ರವಾದಿಗಳು ಅವರೊಡನಿದ್ದು ಅವರಿಗೆ ಸಹಾಯಮಾಡುತ್ತಿದ್ದರು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.


ಯೋಸೇಫನು - ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನು ಕೊಡಬಲ್ಲನೆಂದು ಹೇಳಿದನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು


ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು.


ಭೂಕಂಪವಾದನಂತರ ಸಿಡಿಲುಂಟಾಯಿತು; ಅದರಲ್ಲಿಯೂ ಯೆಹೋವನಿರಲಿಲ್ಲ.


ಕಟ್ಟುವವರು ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದಾಗ ಇಸ್ರಾಯೇಲ್ಯರ ಅರಸನಾದ ದಾವೀದನು ನೇವಿುಸಿದ ಕ್ರಮಕ್ಕನುಸಾರವಾಗಿ ಯೆಹೋವನನ್ನು ಕೀರ್ತಿಸುವದಕ್ಕೋಸ್ಕರ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆಯೂ ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆಯೂ ನಿಂತುಕೊಂಡು


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ನೀನು ನೋಡುತ್ತಿರಲಾಗಿ [ಬೆಟ್ಟದೊಳಗಿಂದ] ಒಂದು ಗುಂಡು ಬಂಡೆಯು ಕೈಯಿಲ್ಲದೆ ಒಡೆಯಲ್ಪಟ್ಟು [ಸಿಡಿದು ಬಂದು] ಆ ಪ್ರತಿಮೆಯ ಕಬ್ಬಿಣಮಣ್ಣಿನ ಹೆಜ್ಜೆಗಳಿಗೆ ಬಡಿದು ಚೂರುಚೂರು ಮಾಡಿತು.


ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು -


ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ - ನಾನು ಭೂಮ್ಯಾಕಾಶಗಳನ್ನು ಅದುರಿಸಿ


ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು;


ಯೆರೂಸಲೇವಿುಗೂ ಯೆಹೂದ ಪ್ರಾಂತದ ಸ್ವಂತ ಪಟ್ಟಣಗಳಿಗೂ ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ವಿುಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರೊಡನೆ ತಿರಿಗಿ ಬಂದವರು ಯಾರಂದರೆ -


ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಯಾವದೂ ಇಲ್ಲದಿರದು, ಎಲ್ಲವೂ ಜೊತೆಜೊತೆಯಾಗಿರುವವು; ಆತನ ಬಾಯಿಂದ ಅಪ್ಪಣೆಯಾಯಿತಲ್ಲವೆ, ಆತನ ಆತ್ಮವು ಇವುಗಳನ್ನು ಒಟ್ಟಿಗೆ ಬರಮಾಡಿತಷ್ಟೆ.


ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು