ಜೆಕರ್ಯ 4:7 - ಕನ್ನಡ ಸತ್ಯವೇದವು J.V. (BSI)7 ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ” ಎಂಬ ಜನಘೋಷವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ, ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.” ಅಧ್ಯಾಯವನ್ನು ನೋಡಿ |