Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 4:9 - ಕನ್ನಡ ಸತ್ಯವೇದವು J.V. (BSI)

9 ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಆ ಕೈಗಳೇ ಇದನ್ನು ಪೂರೈಸುವವು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರ ಯೆಹೋವನೇ ಎಂದು ನಿನಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪ್ರಾರಂಭದಲ್ಲಿ ಚಿಕ್ಕಕಾರ್ಯಗಳನ್ನು ನೋಡಿ ಪರಿಹಾಸ್ಯಮಾಡಿದವರು ಆಗ ಜೆರುಬ್ಬಾಬೆಲನ ಕೈಯಲ್ಲಿ ಅಳತೆನೂಲಿನ ಗುಂಡನ್ನು ಕಂಡು ಸಂತೋಷಪಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಜೆರುಬ್ಬಾಬೆಲನು ನನ್ನ ಆಲಯದ ಅಸ್ತಿವಾರವನ್ನು ಹಾಕುವನು. ಜೆರುಬ್ಬಾಬೆಲನು ಆಲಯವನ್ನು ಕಟ್ಟಿ ಮುಗಿಸುವನು. ಆಗ ನೀವು ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಗೆ ನನ್ನನ್ನು ಕಳುಹಿಸಿದ್ದಾನೆಂದು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 4:9
18 ತಿಳಿವುಗಳ ಹೋಲಿಕೆ  

ಆಗ ಆ ಶೆಷ್ಬಚ್ಚರನು ಬಂದು ಯೆರೂಸಲೇವಿುನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸವು ನಡೆಯುತ್ತಿರುತ್ತದೆ. ಇನ್ನೂ ತೀರಲಿಲ್ಲ ಎಂಬದಾಗಿ ಉತ್ತರಕೊಟ್ಟರು.


ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರ ಯೆಹೋವನೇ ಎಂದು ನಿಮಗೆ ದೃಢವಾಗುವದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವದು.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ನನ್ನ ಬಳಿಗೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, [ಭೂವಿುಯು] ಉಂಟಾದಂದಿನಿಂದ ಅಲ್ಲಿ ಇದ್ದೇನೆ. (ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.)


ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಆಲಯಕ್ಕೆ ಅಸ್ತಿವಾರಹಾಕಿದ ಈ ದಿವಸದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. ಕಣಜದಲ್ಲಿ ಕಾಳು ಇನ್ನು ಇದೆಯೋ?


ಹೀಗಿರಲು ಯೆಹೋವನು ಇಂತೆನ್ನುತ್ತಾನೆ - ನಾನು ಕನಿಕರವುಳ್ಳವನಾಗಿ ಯೆರೂಸಲೇವಿುಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಅಲ್ಲಿ ಕಟ್ಟಲ್ಪಡುವದು; ಯೆರೂಸಲೇವಿುನಲ್ಲಿ ನೂಲು ಎಳೆಯಲ್ಪಡುವದು; ಇದು ಸೇನಾಧೀಶ್ವರ ಯೆಹೋವನ ನುಡಿ.


ಅಲ್ಲದೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದ್ದಾನೆ -


ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು