Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:2 - ಕನ್ನಡ ಸತ್ಯವೇದವು J.V. (BSI)

2 ಅವನು ನನ್ನನ್ನು - ನಿನಗೆ ಏನು ಕಾಣಿಸುತ್ತಿದೆ ಎಂದು ಕೇಳಿದ್ದಕ್ಕೆ - ಹಾರುತ್ತಿರುವ ಒಂದು ಸುರಳಿಯು ಕಾಣಿಸುತ್ತದೆ; ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದುತ್ತರ ಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ದೂತನು ನನಗೆ, “ನಿನಗೆ ಏನು ಕಾಣಿಸುತ್ತದೆ?” ಎಂದಾಗ ನಾನು, ಹಾರುತ್ತಿರುವ ಒಂದು ಸುರುಳಿಯು ಕಾಣಿಸುತ್ತದೆ ಅದರ ಉದ್ದ ಇಪ್ಪತ್ತು ಮೊಳ, ಅಗಲ ಹತ್ತು ಮೊಳ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೂತನು ನನ್ನನ್ನು, “ನಿನಗೆ ಏನು ಕಾಣಿಸುತ್ತಿದೆ?” ಎಂದು ಕೇಳಿದನು. ಅದಕ್ಕೆ ನಾನು “ಹಾರುತ್ತಿರುವ ಪತ್ರದ ಸುರುಳಿ ಕಾಣಿಸುತ್ತಿದೆ. ಅದರ ಉದ್ದ ಒಂಬತ್ತು ಮೀಟರ್, ಅಗಲ ನಾಲ್ಕುವರೆ ಮೀಟರ್,” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಏನನ್ನು ನೋಡುತ್ತೀ?” ಎಂದು ದೇವದೂತನು ಕೇಳಿದನು. “ಒಂದು ಹಾರುವ ಸುರುಳಿ, ಅದು ಮೂವತ್ತು ಅಡಿ ಉದ್ದ, ಹದಿನೈದು ಅಡಿ ಅಗಲವಿದೆ” ಎಂದು ನಾನು ಉತ್ತರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದೂತನು ನನಗೆ, “ಏನು ನೋಡುತ್ತೀ?” ಎಂದಾಗ, ನಾನು, “ಹಾರುವ ಸುರುಳಿಯನ್ನು ನೋಡುತ್ತಿದ್ದೇನೆ. ಅದರ ಉದ್ದವು ಒಂಬತ್ತು ಮೀಟರ್, ಅದರ ಅಗಲವು ನಾಲ್ಕುವರೆ ಮೀಟರ್ ಇದೆ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:2
8 ತಿಳಿವುಗಳ ಹೋಲಿಕೆ  

ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಯೆಹೋವನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ನಾನು - ಒಂದು ನೂಲುಗುಂಡು ಎಂದು ಉತ್ತರಕೊಟ್ಟೆನು. ಆಗ ಕರ್ತನು - ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಹಿಡಿಯುವೆನು; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.


ಅವಳ ಪಾಪಗಳು ಒಂದರ ಮೇಲೊಂದು ಸೇರಿ ಆಕಾಶದ ಪರ್ಯಂತರಕ್ಕೂ ಬೆಳೆದವೆ. ದೇವರು ಅವಳ ಅನ್ಯಾಯಗಳನ್ನು ಜ್ಞಾಪಿಸಿಕೊಂಡನು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.


ನೀನು ಗ್ರಂಥ ಬರೆಯತಕ್ಕ ಸುರಳಿಯನ್ನು ತೆಗೆದುಕೊಂಡು ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು, ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು