Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:3 - ಕನ್ನಡ ಸತ್ಯವೇದವು J.V. (BSI)

3 ಆಗ ಅವನು ನನಗೆ - ಇದು ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪ; ಇದಕ್ಕೆ ತಕ್ಕಂತೆ ಪ್ರತಿಯೊಬ್ಬ ಕಳ್ಳನು ದೇಶದಿಂದ ತೊಡೆಯಲ್ಪಡುವನು; ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳುಸಾಕ್ಷಿಯೂ ದೇಶದಿಂದ ತೊಡೆಯಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ದೇವದೂತನು ನನಗೆ ಹೇಳಿದ್ದೇನೆಂದರೆ, “ಈ ಸುರುಳಿಯಲ್ಲಿ ಶಾಪವು ಬರೆಯಲ್ಪಟ್ಟಿದೆ. ಸುರುಳಿಯ ಒಂದು ಬದಿಯಲ್ಲಿ ಕದಿಯುವ ಜನರಿಗೆ ಶಾಪ ಬರೆಯಲ್ಪಟ್ಟಿದೆ. ಅದರ ಇನ್ನೊಂದು ಬದಿಯಲ್ಲಿ ವಾಗ್ದಾನ ಮಾಡಿಯೂ ಅದನ್ನು ಪಾಲಿಸದೆ ಸುಳ್ಳಾಡುವವರಿಗೆ ಶಾಪ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:3
42 ತಿಳಿವುಗಳ ಹೋಲಿಕೆ  

ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.


ಆದಕಾರಣ ನಾನು ಪವಿತ್ರಾಲಯದ ಅಧಿಪತಿಗಳನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ ಇಸ್ರಾಯೇಲನ್ನು ದೂಷಣೆಗೂ ಗುರಿಮಾಡಿದೆನು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ಮುಖ್ಯವಾಗಿ, ನನ್ನ ಸಹೋದರರೇ, ಆಣೆ ಇಡಲೇಬೇಡಿರಿ; ಆಕಾಶದ ಮೇಲಾಗಲಿ ಭೂವಿುಯ ಮೇಲಾಗಲಿ ಇನ್ನಾತರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.


ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ಅಪ್ಪಣೆಯಂತೆ ಇದು ಹೊರಟು ಕಳ್ಳನ ಮನೆಯೊಳಗೂ ನನ್ನ ಹೆಸರೆತ್ತಿ ಸುಳ್ಳುಸಾಕ್ಷಿ ಹೇಳುವವನ ಮನೆಯೊಳಗೂ ನುಗ್ಗಿ ನಟ್ಟನಡುವೆ ನೆಲೆಗೊಂಡು ಅದನ್ನು ಕಲ್ಲುಮರ ಸಹಿತವಾಗಿ ನಾಶಮಾಡುವದು ಎಂದು ಹೇಳಿದನು.


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು ಈ ಪಟ್ಟಣವು ಲೋಕದ ಸಮಸ್ತಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು.


ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ].


ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.


ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ಆ ದಿವಸವು ಭೂನಿವಾಸಿಗಳೆಲ್ಲರ ಮೇಲೆ ಬರುವದು.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಿಮ್ಮಲ್ಲಿ ಯಾವನೂ ತನ್ನ ಹೃದಯದಲ್ಲಿ ನೆರೆಯವನಿಗೆ ಕೇಡನ್ನು ಬಗೆಯದಿರಲಿ; ಸುಳ್ಳುಸಾಕ್ಷಿಗೆ ಎಂದೂ ಸಂತೋಷಪಡಬೇಡಿರಿ; ಇವುಗಳನ್ನೆಲ್ಲಾ ದ್ವೇಷಿಸುವವನಾಗಿದ್ದೇನೆ; ಇದು ಯೆಹೋವನ ನುಡಿ.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ಇಸ್ರಾಯೇಲ್ಯರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು; ಆದಕಾರಣ ನಿನ್ನ ಶಾಪದ ಕೇಡುಗಳೂ ದೇವಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವದ್ರೋಹಿಗಳೇ ಸರಿ.


ಸೀಮೆಯು ಸೂಳೆಗಾರರಿಂದ ತುಂಬಿದೆ, ದೈವಶಾಪದ ನಿವಿುತ್ತ ದೇಶವು ದುಃಖಿಸುತ್ತದೆ; ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವರ ಶೌರ್ಯವು ಅನ್ಯಾಯಸಾಧಕ.


ನೀವು ಕಳವು ಕೊಲೆ ಹಾದರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ ಬಾಳನಿಗೆ ಹೋಮವನ್ನರ್ಪಿಸಿ ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ


ಹಾಗಾಗದೆ ಹೊಟ್ಟೆತುಂಬಿದವನಾದರೆ ಯೆಹೋವನು ಯಾರೋ ಎಂದು ನಿನ್ನನ್ನು ತಿರಸ್ಕರಿಸೇನು; ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೇನು.


ಕಳ್ಳನೊಂದಿಗೆ ಪಾಲುಗಾರನಾದವನು ತನಗೆ ತಾನೇ ಶತ್ರು; ಆಣೆಯಿಡುವದನ್ನು ಕೇಳಿದರೂ ಸುಮ್ಮನಿರುವನು.


ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.


ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ನಾವು ಇಟ್ಟ ಆಣೆಯ ನಿವಿುತ್ತ ದೇವರ ಕೋಪವು ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದುಳಿಸಬೇಕು. ಆದರೆ ಒಂದನ್ನು ಮಾಡೋಣ.


ಆಹಾ, ನಾನು ನೋಡಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರಳಿಯು ಕಾಣಿಸಿತು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು