Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 5:9 - ಕನ್ನಡ ಸತ್ಯವೇದವು J.V. (BSI)

9 ನಾನು ಕಣ್ಣೆತ್ತಿನೋಡಲು ಆಹಾ, ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು; ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು; ಅವರು ಪೀಪಾಯಿಯನ್ನು ಭೂಮ್ಯಾಕಾಶಗಳ ಅಂತರಾಳದಲ್ಲಿ ಎತ್ತಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಕಣ್ಣೆತ್ತಿ ನೋಡಲು, ಆಹಾ ಕೊಕ್ಕರೆಯ ರೆಕ್ಕೆಯಂತಿರುವ ರೆಕ್ಕೆಯುಳ್ಳ ಇಬ್ಬರು ಹೆಂಗಸರು ಕಂಡುಬಂದರು. ಅವರ ರೆಕ್ಕೆಗಳೊಳಗೆ ಗಾಳಿಯು ತುಂಬಿಕೊಂಡಿತ್ತು. ಅವರು ಅಳತೆಯ ಬುಟ್ಟಿಯನ್ನು ಎತ್ತಿಕೊಂಡು ಹಾರಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪುನಃ ನಾನು ಕಣ್ಣೆತ್ತಿ ನೋಡಲು, ಇಗೋ, ಕೊಕ್ಕರೆಯ ರೆಕ್ಕೆಗಳಂತಿರುವ ರಭಸವಾದ ರೆಕ್ಕೆಗಳುಳ್ಳ ಇಬ್ಬರು ಮಹಿಳೆಯರು ಬರುತ್ತಿರುವುದನ್ನು ಕಂಡೆನು. ಅವರು ಕೊಳಗದ ಪಾತ್ರೆಯನ್ನು ಎತ್ತಿಕೊಂಡು ಹಾರಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಬಳಿಕ ನಾನು ಮೇಲಕ್ಕೆ ನೋಡಿದಾಗ ಕೊಕ್ಕರೆಯಂತೆ ರೆಕ್ಕೆಗಳಿರುವ ಎರಡು ಸ್ತ್ರೀಯರನ್ನು ಕಂಡೆನು. ಅವರು ಹಾರುತ್ತಾ ರೆಕ್ಕೆಗಳಲ್ಲಿಯ ಗಾಳಿಯ ಸಹಾಯದಿಂದ ಬುಟ್ಟಿಯನ್ನು ಎತ್ತಿಕೊಂಡು ಆಕಾಶದಲ್ಲಿ ಹಾರಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ನಾನು ಕಣ್ಣೆತ್ತಿ ನೋಡಿದಾಗ, ಇಬ್ಬರು ಸ್ತ್ರೀಯರು ಇದ್ದರು. ಅವರ ರೆಕ್ಕೆಗಳು ರಭಸವಾಗಿದ್ದವು. ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು. ಅವರು ಆಕಾಶ ಮತ್ತು ಭೂಮಿಯ ನಡುವೆ ಬುಟ್ಟಿಯನ್ನು ಎತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 5:9
9 ತಿಳಿವುಗಳ ಹೋಲಿಕೆ  

ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಹೆಣ ಬಿದ್ದಲ್ಲಿ ಹದ್ದುಗಳು ಕೂಡುವವು.


ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವು; ಇವುಗಳ ಮಾಂಸವನ್ನು ತಿನ್ನಬಾರದು; ಇವು ಹೇಯವಾಗಿರಬೇಕು, ಯಾವವಂದರೆ - ಗರುಡ, ಬೆಟ್ಟದ ಹದ್ದು,


ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.


ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯವಿುತ ಕಾಲಗಳನ್ನು ತಿಳಿದುಕೊಂಡಿದೆ, ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ; ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.


ಅವರು ಕೊಳಗವನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ ಎಂದು ನನಗೆ ವಿವರಿಸುವ ದೇವದೂತನನ್ನು ನಾನು ಕೇಳಿದ್ದಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು