Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:13 - ಕನ್ನಡ ಸತ್ಯವೇದವು J.V. (BSI)

13 ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು; ಮತ್ತು ಯಾಜಕನು ತನ್ನ ಸಿಂಹಾಸನದಲ್ಲಿ ಕೂಡ್ರುವನು; ಅವರಿಬ್ಬರೂ ಸಮ್ಮತಿಸಮಾಧಾನಗಳಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೌದು, ಅವನೇ ಯೆಹೋವನ ಆಲಯವನ್ನು ಕಟ್ಟಿಸಿ ರಾಜವೈಭವವನ್ನು ಹೊಂದಿಕೊಂಡು ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಮತ್ತು ಯಾಜಕರು ತನ್ನ ಸಿಂಹಾಸನದಲ್ಲಿ ಕುಳಿತಿರುವರು. ಅವರಿಬ್ಬರೂ ಸಮ್ಮತಿ ಸಮಾಧಾನದಿಂದ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆತನು ದೇವಾಲಯವನ್ನು ಕಟ್ಟುವನು ಮತ್ತು ಗೌರವವನ್ನು ಹೊಂದುವನು. ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜ್ಯವನ್ನು ಆಳುವನು. ಒಬ್ಬ ಯಾಜಕನು ಆತನ ಸಿಂಹಾಸನದ ಬಳಿಯಲ್ಲಿ ನಿಂತುಕೊಂಡಿರುವನು. ಅವರಿಬ್ಬರೂ ಸಮಾಧಾನದಿಂದ ಕೆಲಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನೇ ಯೆಹೋವ ದೇವರ ದೇವಾಲಯವನ್ನು ಕಟ್ಟಿದ ಮೇಲೆ, ರಾಜವೈಭವವನ್ನು ಧರಿಸಿ ಸಿಂಹಾಸನದ ಮೇಲೆ ಆಸೀನನಾಗಿ ಆಳುವನು. ಅವನ ಸಿಂಹಾಸನದಲ್ಲಿ ಒಬ್ಬ ಯಾಜಕನಾಗಿರುವನು. ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:13
45 ತಿಳಿವುಗಳ ಹೋಲಿಕೆ  

ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಪಡುವದಿಲ್ಲ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣಪಾತ್ರೆಗಳನ್ನು ಅಂದರೆ ತಂದೆಯ ಸಂತಾನ ಸಂತತಿಯಾದ ಅವನ ವಂಶದ ಭಾರವನ್ನೆಲ್ಲಾ ಅವನಿಗೆ ತಗಲುಹಾಕುವರು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ನಿನ್ನ ರಕ್ಷಣಕಾರ್ಯದಿಂದ ಅವನ ಘನತೆಯು ಬಹು ವೃದ್ಧಿಯಾಯಿತು; ಮಹಿಮಪ್ರಭಾವಗಳನ್ನು ಅವನಿಗೆ ಬರಮಾಡಿದ್ದೀ.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ಕೊಲೊಸ್ಸೆಯಲ್ಲಿರುವ ದೇವಜನರಿಗೆ ಅಂದರೆ ಕ್ರಿಸ್ತನಲ್ಲಿರುವ ನಂಬಿಗಸ್ತರಾದ ಸಹೋದರರಿಗೆ ಬರೆಯುವದೇನಂದರೆ - ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.


ಇವರಿಂದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಕಿರೀಟವನ್ನು ರೂಪಿಸಿ ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಯ ಮೇಲೆ ಇಟ್ಟು


ಅದಕ್ಕೆ ಅವನು - ಇವು ಸರ್ವಭೂಲೋಕದೊಡೆಯನ ಸನ್ನಿಧಿ ಸೇವಕರೂ ಎಣ್ಣೆಯ ಬುಗ್ಗೆಗಳೂ ಆದ ಇಬ್ಬರು ಪುರುಷರು ಎಂದು ಹೇಳಿದನು.


ಆತನು ಯೆಹೋವನ ಬಲವನ್ನೂ ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು; ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವದು; ಆತನು ಭೂವಿುಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.


ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.


ಸಾಲೇವಿುನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದು ಅಬ್ರಾಮನನ್ನು ಆಶೀರ್ವದಿಸಿ -


ಯೆಹೋವನು ನನ್ನ ಒಡೆಯನಿಗೆ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ನುಡಿದನು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಆ ಕೈಗಳೇ ಇದನ್ನು ಪೂರೈಸುವವು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರ ಯೆಹೋವನೇ ಎಂದು ನಿನಗೆ ಗೊತ್ತಾಗುವದು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು ನೀನು ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


[ಯುದ್ಧದ] ಗದ್ದಲದಲ್ಲಿ ತುಳಿದಾಡಿದವರೆಲ್ಲರ ಮೆಟ್ಟುಗಳೂ ರಕ್ತದಲ್ಲಿ ಹೊರಳಾಡಿಸಿದ ಉಡುಪುಗಳೂ ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು