Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 6:15 - ಕನ್ನಡ ಸತ್ಯವೇದವು J.V. (BSI)

15 ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರ ಯೆಹೋವನೇ ಎಂದು ನಿಮಗೆ ದೃಢವಾಗುವದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೂರದಲ್ಲಿ ವಾಸಿಸುವ ಜನರು ಬಂದು ಆಲಯವನ್ನು ಕಟ್ಟುವರು. ಆಗ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ನೀವು ತಿಳಿಯುವಿರಿ. ಯೆಹೋವನು ಹೇಳಿದಂತೆ ನೀವು ಮಾಡಿದರೆ ಇವೆಲ್ಲಾ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 6:15
20 ತಿಳಿವುಗಳ ಹೋಲಿಕೆ  

ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಕಟ್ಟುವರು, ಅವರ ಅರಸರು ನಿನ್ನನ್ನು ಸೇವಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದುಬಿಟ್ಟು ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನೀನು ನನ್ನ ಮಾರ್ಗಗಳಲ್ಲಿ ನಡೆದು ನಾನು ನಿನಗೆ ವಹಿಸಿದ ಪಾರುಪತ್ಯವನ್ನು ನೆರವೇರಿಸಿದರೆ ನನ್ನ ಆಲಯದ ಮುಖ್ಯಾಧಿಕಾರಿಯಾಗಿ ನನ್ನ ಪ್ರಾಕಾರಗಳನ್ನು ನೋಡಿಕೊಳ್ಳುವಿ; ಈ ಸನ್ನಿಧಾನದೂತರ ನಡುವೆ ಪ್ರವೇಶಿಸುವ ಹಕ್ಕನ್ನು ನಿನಗೆ ಕೊಡುವೆನು.


ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.


ಯೆಹೋವನು ಮನುಷ್ಯರ ಬಾಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ - ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು ಎಂದು ಹೇಳುತ್ತಾನೆ.


ಅವನಿಗೆ ಹೀಗೆ ಹೇಳು - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ ಯೆಹೋವನ ಆಲಯವನ್ನು ಕಟ್ಟಿಸುವನು;


ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ.


ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.


ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಪ್ರಾಣಿಗಳೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು