ಜೆಕರ್ಯ 6:7 - ಕನ್ನಡ ಸತ್ಯವೇದವು J.V. (BSI)7 ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಅವನು - ಹೊರಡಿರಿ, ಲೋಕದಲ್ಲಿ ಸಂಚರಿಸಿರಿ ಎಂದಪ್ಪಣೆಮಾಡಲು ಅವು ಲೋಕದಲ್ಲಿ ಸಂಚರಿಸಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕೆಂಪು ಕುದುರೆಗಳು ಬಂದು ಲೋಕದಲ್ಲಿ ಸಂಚರಿಸುವುದಕ್ಕೆ ಹೊರಡಬೇಕೆಂದು ತ್ವರೆಪಟ್ಟವು; ಆಗ ಅವನು, “ಹೊರಡಿರಿ, ಲೋಕದಲ್ಲಿ ಸಂಚರಿಸಿರಿ” ಎಂದು ಅಪ್ಪಣೆ ಮಾಡಲು ಅವು ಲೋಕದಲ್ಲಿ ಸಂಚರಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಕೆಂಪು ಕುದುರೆಗಳು ಲೋಕದಲ್ಲೆಲ್ಲ ಗಸ್ತು ತಿರುಗಿ,” ಎಂದು ಅಪ್ಪಣೆಮಾಡಲು, ಅವು ಅಂತೆಯೇ ಮಾಡಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕೆಂಪು ಮಚ್ಚೆ ಇರುವ ಕುದುರೆಗಳು ತಮಗೆ ನೇಮಕವಾದ ಜಾಗಕ್ಕೆ ಹೋಗಿ ಅದನ್ನು ನೋಡಲು ಆತುರಗೊಂಡಿದ್ದವು. ಆಗ ದೂತನು ಅವುಗಳಿಗೆ, “ಹೋಗಿ, ಭೂಮಿಯ ಮೇಲೆ ಹೋಗಿ ಬನ್ನಿ” ಎಂದು ಹೇಳಿದಾಗ ಅವುಗಳು ಹೋಗಿ ತಮ್ಮ ಪ್ರಾಂತ್ಯದಲ್ಲಿ ನಡೆದಾಡಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕೆಂಪು ಕುದುರೆಗಳ ರಥ ಹೊರಟು ಲೋಕದಲ್ಲಿ ಸಂಚಾರ ಮಾಡಲು ಹೋಗುವುದಕ್ಕೆ ನೋಡಿದವು. ಆಗ ಅವನು, “ಹೋಗಿ ಲೋಕದಲ್ಲಿ ಅತ್ತಿತ್ತ ನಡೆದಾಡುವುದಕ್ಕೆ ಇಲ್ಲಿಂದ ಹೋಗಿರಿ,” ಎಂದನು. ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು. ಅಧ್ಯಾಯವನ್ನು ನೋಡಿ |