ಜೆಕರ್ಯ 7:2 - ಕನ್ನಡ ಸತ್ಯವೇದವು J.V. (BSI)2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ ರೆಗೆಮ್ ಮೆಲೆಕನನ್ನೂ ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನು ರೆಗೆಮ್ ಮೆಲೆಕ್‍ನನ್ನು ಹಾಗೂ ಅವನ ಪರಿಜನರನ್ನು ಸರ್ವೇಶ್ವರಸ್ವಾಮಿಯ ಆಶೀರ್ವಾದವನ್ನು ಕೋರಲು ದೇವಾಲಯಕ್ಕೆ ಕಳುಹಿಸಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬೇತೇಲಿನ ಜನರು ಸರೆಚರ್, ರೆಗೆಮ್ ಮೆಲೆಕ್ ಮತ್ತು ಅವರ ಜನರನ್ನು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಲು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು. ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ [ಇವನನ್ನು ಕೊಂದುಹಾಕಿ] ನಮಗೆ ದೊಡ್ಡ ಕೇಡನ್ನು ಉಂಟುಮಾಡಿಕೊಳ್ಳುವವರಾಗಿದ್ದೇವೆ ಎಂಬದಾಗಿ ಸಕಲಜನ ಸಮೂಹಕ್ಕೆ ಹೇಳಿದರು.