ಜೆಕರ್ಯ 8:13 - ಕನ್ನಡ ಸತ್ಯವೇದವು J.V. (BSI)13 ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ, ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿ ಆಶೀರ್ವದಿಸುವೆನು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜನರು ಇಸ್ರೇಲ್ ಮತ್ತು ಯೆಹೂದದ ಹೆಸರುಗಳನ್ನು ಶಾಪ ಇಡುವದಕ್ಕಾಗಿ ಉಪಯೋಗಿಸುವರು. ಆದರೆ ನಾನು ಇಸ್ರೇಲ್ ಮತ್ತು ಯೆಹೂದವನ್ನು ಸಂರಕ್ಷಿಸುವೆನು. ಆ ಹೆಸರುಗಳು ಆಶೀರ್ವದಿಸುವದಕ್ಕಾಗಿ ಉಪಯೋಗಿಸಲ್ಪಡುವದು. ಆದ್ದರಿಂದ ಭಯಪಡಬೇಡಿ, ಬಲಶಾಲಿಗಳಾಗಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ. ಅಧ್ಯಾಯವನ್ನು ನೋಡಿ |