Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:14 - ಕನ್ನಡ ಸತ್ಯವೇದವು J.V. (BSI)

14 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡು ಮಾಡಬೇಕೆಂದು ನಾನು ನಿಷ್ಕರುಣಿಯಾಗಿ ಸಂಕಲ್ಪಿಸಿದಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ಪೂರ್ವಿಕರು ನನಗೆ ಸಿಟ್ಟೆಬ್ಬಿಸಿದಾಗ ನಿಮಗೆ ಕೇಡುಮಾಡಬೇಕೆಂದು ನಾನು ಕರುಣೆಯಿಲ್ಲದೆ ಸಂಕಲ್ಪಸಿದಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನಿಮ್ಮ ಪೂರ್ವಜರ ನಿಮಿತ್ತ ನಾನು ಕೋಪಗೊಂಡಾಗ, ನಿಮಗೆ ಕೇಡುಮಾಡಬೇಕೆಂದು ನಿಷ್ಕರುಣಿಯಾಗಿ ಸಂಕಲ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಿಮ್ಮ ಪೂರ್ವಿಕರು ನನ್ನನ್ನು ಕೋಪಗೊಳಿಸಿದರು. ಆದ್ದರಿಂದ ಅವರನ್ನು ನಾಶಮಾಡಲು ನಾನು ತೀರ್ಮಾನಿಸಿದೆನು. ಮತ್ತು ಈ ತೀರ್ಮಾನವನ್ನು ಬದಲಾಯಿಸುವದೇ ಇಲ್ಲವೆಂದು ನಿರ್ಧರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಕರುಣಿಸದೆ, ವಿನಾಶವನ್ನು ಬರಮಾಡಲು ಯೋಚಿಸಿದೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:14
12 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ; ಇದು ಸಾಗುವದು, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷವಿುಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವದು; ಇದು ಕರ್ತನಾದ ಯೇಹೋವನ ನುಡಿ.


ನಾನು ಮೊದಲು ಇವರನ್ನು ಕಿತ್ತುಹಾಕಲು, ಕೆಡವಲು, ಹಾಳುಮಾಡಲು, ನಾಶಪಡಿಸಲು, ಬಾಧಿಸಲು ಹೇಗೆ ಎಚ್ಚರಗೊಂಡಿದ್ದೆನೋ ಹಾಗೆಯೇ ಇನ್ನು ಮೇಲೆ ಇವರನ್ನು ಕಟ್ಟಲು, ನೆಡಲು ಎಚ್ಚರಗೊಳ್ಳುವೆನು. ಇದು ಯೆಹೋವನ ನುಡಿ.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಪ್ರಾತಃಕಾಲದಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.


ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವದು; ಆತನ ಸಂಕಲ್ಪವು ಎಂದಿಗೂ ಕದಲುವದಿಲ್ಲ.


ಅವರು ದೇವಪ್ರೇಷಿತರನ್ನು ಗೇಲಿಮಾಡಿ ಆತನ ಮಾತುಗಳನ್ನು ತುಚ್ಫೀಕರಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ ಆತನ ಕೋಪಾಗ್ನಿಯು ಆತನ ಪ್ರಜೆಯ ಮೇಲೆ ಉರಿಯಹತ್ತಿತು, ಅದರ ತಾಪವು ಆರಿಹೋಗಲೇ ಇಲ್ಲ.


ಯೆಹೋವನು ಇಂತೆನ್ನುತ್ತಾನೆ - ನಾನು ಈ ಜನರಿಗೆ ಇಷ್ಟು ದೊಡ್ಡ ಕೇಡನ್ನು ಬರಮಾಡಿದಂತೆ ವಾಗ್ದಾನಮಾಡಿದ ಎಲ್ಲಾ ಮೇಲನ್ನೂ ಬರಮಾಡುವೆನು.


ಇವರಿಗೆ ಗತಿಯಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ಯೆಹೋವನು ನಿಮ್ಮ ಪಿತೃಗಳ ಮೇಲೆ ಬಹುಕೋಪಗೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು