ಜೆಕರ್ಯ 8:19 - ಕನ್ನಡ ಸತ್ಯವೇದವು J.V. (BSI)19 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ, ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನುಂಟುಮಾಡುವವು; ಹೀಗಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆತನು ಹೇಳುವುದೇನೆಂದರೆ, “ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳಿನಲ್ಲಿ ನೀವು ದುಃಖದಿಂದ ಉಪವಾಸ ಮಾಡುವ ವಿಶೇಷ ದಿವಸಗಳಿವೆ. ಆ ದುಃಖದ ದಿವಸಗಳು ನಿಮ್ಮ ಸಂತಸದ ದಿವಸಗಳಾಗಿ ಪರಿಗಣಿಸಬೇಕು. ನೀವು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸುವವರಾಗಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.” ಅಧ್ಯಾಯವನ್ನು ನೋಡಿ |