ಜೆಕರ್ಯ 8:21 - ಕನ್ನಡ ಸತ್ಯವೇದವು J.V. (BSI)21 ಒಂದು ಊರಿನವರು ಇನ್ನೊಂದೂರಿಗೆ ಹೋಗಿ - ಯೆಹೋವನ ಪ್ರಸನ್ನತೆಯನ್ನು ಬೇಡುವದಕ್ಕೂ ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಒಂದು ಊರಿನವರು ಇನ್ನೊಂದು ಊರಿಗೆ ಹೋಗಿ, ‘ಯೆಹೋವನ ಪ್ರಸನ್ನತೆಯನ್ನು ಬೇಡುವುದಕ್ಕೂ, ಸೇನಾಧೀಶ್ವರ ಯೆಹೋವನನ್ನು ಆಶ್ರಯಿಸುವುದಕ್ಕೂ ಹೋಗೋಣ ಬನ್ನಿರಿ, ನಾವೂ ಹೋಗುತ್ತೇವೆ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ‘ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು, ಅವರ ಆಶೀರ್ವಾದವನ್ನು ಬೇಡಲು ದೇವಾಲಯಕ್ಕೆ ಹೋಗುತ್ತಿದ್ದೇವೆ. ನಮ್ಮೊಡನೆ ಬನ್ನಿ, ಹೋಗೋಣ’ ಎಂದು ಒಂದು ಊರಿನವರು ಮತ್ತೊಂದೂರಿನವರಿಗೆ ಹೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬೇರೆಬೇರೆ ನಗರದ ಜನರು ಪರಸ್ಪರ ವಂದಿಸುವರು. ಅವರಲ್ಲಿ ಕೆಲವರು, ‘ನಾವು ಸರ್ವಶಕ್ತನಾದ ಯೆಹೋವನನ್ನು ಆರಾಧಿಸಲು ಹೋಗುತ್ತಿದ್ದೇವೆ’ ಅನ್ನುವರು. ಅದಕ್ಕೆ ಇನ್ನೊಬ್ಬನು, ‘ನಾನು ನಿಮ್ಮೊಂದಿಗೆ ಬರುತ್ತೇನೆ’” ಅನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಒಂದು ಪಟ್ಟಣದ ನಿವಾಸಿಗಳು ಮತ್ತೊಂದಕ್ಕೆ ಹೋಗಿ, ‘ನಾವು ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ ಬೇಗ ಹೋಗೋಣ. ನಾನು ಕೂಡ ಹೋಗುತ್ತೇನೆ,’ ಎಂದು ಹೇಳುವರು. ಅಧ್ಯಾಯವನ್ನು ನೋಡಿ |