ಜೆಕರ್ಯ 8:23 - ಕನ್ನಡ ಸತ್ಯವೇದವು J.V. (BSI)23 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ಜನಾಂಗಗಳ ವಿವಿಧಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು - ನಾವು ನಿಮ್ಮೊಂದಿಗೆ ಬರುವೆವು, ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಸಮಯದಲ್ಲಿ ಬೇರೆಬೇರೆ ಭಾಷೆಗಳನ್ನು ಮಾತಾಡುವ ಅನೇಕ ವಿದೇಶಿಯರು ಯೆಹೂದ್ಯನೊಬ್ಬನ ಬಳಿಗೆ ಬಂದು, ಅವನ ಬಟ್ಟೆಯ ಅಂಚನ್ನು ಹಿಡಿದು, ‘ದೇವರು ನಿಮ್ಮೊಂದಿಗಿದ್ದಾನೆಂದು ನಾವು ಕೇಳಿದ್ದೇವೆ. ನಿಮ್ಮೊಂದಿಗೆ ನಾವೂ ಬಂದು ಆತನನ್ನು ಆರಾಧಿಸಬಹುದೋ?’” ಎಂದು ಕೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು. ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಮಂದಿಯಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ - ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯಪ್ರಧನಾಗಿದ್ದಾನೆ ಎಂದು ನುಡಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇವಿುಸಿದನು.