ಜೆಕರ್ಯ 8:4 - ಕನ್ನಡ ಸತ್ಯವೇದವು J.V. (BSI)4 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಯೆರೂಸಲೇವಿುನ ಚೌಕಗಳಲ್ಲಿ ಮುದುಕ ಮುದುಕಿಯರು ಕೂಡ್ರುವರು; ಅತಿವೃದ್ಧಾಪ್ಯದ ನಿವಿುತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು. ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ವೃದ್ಧವೃದ್ಧೆಯರು ಜೆರುಸಲೇಮಿನ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಿ ಕಾಣಸಿಗುವರು. ಅವರು ಬಹು ದೀರ್ಘ ಆಯುಷ್ಯವನ್ನು ಹೊಂದುವದರಿಂದ ಅವರಿಗೆ ಕೈಕೋಲು ಬೇಕಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ವೃದ್ಧರೂ, ಮುದುಕಿಯರೂ ವಾಸವಾಗಿರುವರು. ವೃದ್ದಾಪ್ಯದಿಂದ ಒಬ್ಬೊಬ್ಬರ ಕೈಯಲ್ಲಿ ಅವರವರ ಕೋಲು ಇರುವುದು. ಅಧ್ಯಾಯವನ್ನು ನೋಡಿ |