Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:6 - ಕನ್ನಡ ಸತ್ಯವೇದವು J.V. (BSI)

6 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ? ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದ ಸ್ಥಿತಿಯು ಈ ಜನಶೇಷದವರ ದೃಷ್ಟಿಗೆ ಅತ್ಯಾಶ್ಚರ್ಯವಾದರೂ ನನ್ನ ದೃಷ್ಟಿಗೆ ಅತ್ಯಾಶ್ಚರ್ಯವೋ?” ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಳಿದುಳಿದುವರು “ಇದು ಆಶ್ಚರ್ಯಕರ” ಎಂದು ಹೇಳುವರು. ನಾನೂ ಇದು ಆಶ್ಚರ್ಯಕರವೆಂದು ತಿಳಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇದು ಈ ದಿವಸಗಳಲ್ಲಿ ಉಳಿದ ಈ ಜನರ ದೃಷ್ಟಿಗೆ ಆಶ್ಚರ್ಯವಾಗಿ ತೋರಿದರೂ, ನನ್ನ ಕಣ್ಣುಗಳಿಗೆ ಸಹ ಆಶ್ಚರ್ಯವಾಗಿ ತೋರುವುದೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:6
13 ತಿಳಿವುಗಳ ಹೋಲಿಕೆ  

ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?


ಆತನು - ಮನುಷ್ಯರಿಗೆ ಅಸಾಧ್ಯವಾದ ಕಾರ್ಯಗಳು ದೇವರಿಗೆ ಸಾಧ್ಯವಾಗಿವೆ ಅಂದನು.


ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು.


ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವದು; ಆದರೆ ನೀನು ಅದನ್ನು ನಂಬದೆಹೋದದ್ದರಿಂದ ಅದೆಲ್ಲಾ ಸಂಭವಿಸುವ ದಿನದವರೆಗೂ ಮಾತನಾಡಲಾರದೆ ಮೂಕನಾಗಿರುವಿ ಎಂದು ಅವನಿಗೆ ಉತ್ತರಕೊಟ್ಟನು.


ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.


ಇದು ಯೆಹೋವನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ.


ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು