Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 8:9 - ಕನ್ನಡ ಸತ್ಯವೇದವು J.V. (BSI)

9 ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ದೇವಾಲಯವನ್ನು ಕಟ್ಟುವ ಉದ್ದೇಶದಿಂದ ಸೇನಾಧೀಶ್ವರ ಯೆಹೋವನ ಆ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ ಪ್ರವಾದಿಗಳ ಬಾಯಿಂದ ಈ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ಬಲಗೊಳ್ಳಿರಿ! ಸರ್ವಶಕ್ತನಾದ ಯೆಹೋವನು ತನ್ನ ಆಲಯವನ್ನು ತಿರುಗಿ ಕಟ್ಟಲು ಅಸ್ತಿವಾರವನ್ನು ಹಾಕುವಾಗ ಪ್ರವಾದಿಗಳು ಕೊಟ್ಟ ಸಂದೇಶವನ್ನೇ ನೀವು ತಿರುಗಿ ಕೇಳುತ್ತಿದ್ದೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 8:9
18 ತಿಳಿವುಗಳ ಹೋಲಿಕೆ  

ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.


ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆ ನುಡಿ - ನಾನು ಭೂಮ್ಯಾಕಾಶಗಳನ್ನು ಅದುರಿಸಿ


ಯೆಹೋವನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರಿಗೆ ಕೊಟ್ಟ ವಿಧಿ ನ್ಯಾಯಗಳನ್ನು ನೀನು ಕೈಕೊಳ್ಳುವದಾದರೆ ಸಫಲನಾಗುವಿ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು; ಅಂಜಬೇಡ, ಕಳವಳಗೊಳ್ಳಬೇಡ.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ಸೇನಾಧೀಶ್ವರ ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು -


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!


ಆಗ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲ್, ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವ, ಸಮಸ್ತಜನಶೇಷ, ಇವರೆಲ್ಲಾ ಯೆಹೋವನೆಂಬ ತಮ್ಮ ದೇವರ ನುಡಿಗೂ ಯೆಹೋವನೆಂಬ ತಮ್ಮ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಯಾದ ಹಗ್ಗಾಯನು ಹೇಳಿದ ಮಾತುಗಳಿಗೂ ಕಿವಿಗೊಟ್ಟು ಯೆಹೋವನಲ್ಲಿ ಭಯಭಕ್ತಿಯುಳ್ಳವರಾದರು.


ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೆಯ ವರುಷದ ಆರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ಶೆಯಲ್ತೀಯೇಲನಿಗೆ ಹುಟ್ಟಿದ ಯೆಹೂದ ದೇಶಾಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನಿಗೆ ಜನಿಸಿದ ಮಹಾಯಾಜಕನಾದ ಯೆಹೋಶುವನಿಗೂ ಪ್ರವಾದಿಯಾದ ಹಗ್ಗಾಯನ ಮೂಲಕ ಹೇಳಿಕಳುಹಿಸಿದನು -


ಆಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ - ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಯೆಹೋವದೇವರು ನಿನ್ನ ಸಂಗಡ ಇರುತ್ತಾನೆ; ಆತನು ತನ್ನ ಆಲಯದ ಎಲ್ಲಾ ಕೆಲಸವು ತೀರುವವರೆಗೂ ನಿನ್ನನ್ನು ಕೈ ಬಿಡುವದಿಲ್ಲ, ತೊರೆಯುವದಿಲ್ಲ.


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ.


ನಿನ್ನನ್ನು ಕೈಬಿಡುವದಿಲ್ಲ, ತೊರೆಯುವದಿಲ್ಲ. ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಯಾಕಂದರೆ ನಾನು ಈ ಜನರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶವನ್ನು ಇವರಿಗೆ ನೀನೇ ಸ್ವಾಧೀನಪಡಿಸಬೇಕು.


ಯೆಹೂದ್ಯರ ಹಿರಿಯರು ಪ್ರವಾದಿಯಾದ ಹಗ್ಗೈ, ಇದ್ದೋವಿನ ಮಗನಾದ ಜೆಕರೀಯ ಇವರ ಪ್ರಬೋಧನೆಯಿಂದ ಪ್ರೇರಿತರಾಗಿ ಕಟ್ಟುವ ಕೆಲಸವನ್ನು ಸಾಗಿಸುತ್ತಾ ಬಂದು ಇಸ್ರಾಯೇಲ್ ದೇವರ ಆಜ್ಞಾನುಸಾರವಾಗಿಯೂ ಪಾರಸಿಯ ರಾಜರಾದ ಕೋರೆಷ್, ದಾರ್ಯಾವೆಷ್, ಅರ್ತಷಸ್ತ ಇವರ ಅಪ್ಪಣೆಯ ಆಧಾರದಿಂದಲೂ ಕಟ್ಟಡವನ್ನು ಮುಗಿಸಿದರು.


ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಆಲಯಕ್ಕೆ ಅಸ್ತಿವಾರಹಾಕಿದ ಈ ದಿವಸದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ. ಕಣಜದಲ್ಲಿ ಕಾಳು ಇನ್ನು ಇದೆಯೋ?


ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು ಎಂದು ಹೇಳಿದನು.


ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು