Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:11 - ಕನ್ನಡ ಸತ್ಯವೇದವು J.V. (BSI)

11 [ನನ್ನ ಜನವೇ,] ನೀನು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀನು ನನ್ನೊಡನೆ ಒಡಂಬಡಿಕೆಯನ್ನು ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ನಿನ್ನ ಸೆರೆಯವರನ್ನು ನೀರಿಲ್ಲದ ಬಾವಿಯೊಳಗಿಂದ ಬಿಡುಗಡೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:11
32 ತಿಳಿವುಗಳ ಹೋಲಿಕೆ  

[ಸೆರೆಯಲ್ಲಿ] ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು; ಅವನಿಗೆ ಅನ್ನದ ಕೊರತೆಯೇ ಇರದು.


ಆಗ ಮೋಶೆ ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿವಿುಕಿಸಿ - ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವು ಇದೇ ಅಂದನು.


ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪನುಸಾರವಾಗಿ ನಿನ್ನನ್ನು ಕರೆದು ಕೈಹಿಡಿದು ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇವಿುಸಿದ್ದೇನೆ.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ ಅಂದನು.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಹೊರಟುಹೋಗಿರಿ, ಕತ್ತಲಲ್ಲಿರುವವರಿಗೆ - ಬೆಳಕಿಗೆ ಹೊರಡಿರಿ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವಾಸ್ತ್ಯಗಳನ್ನು ಅವರಿಗೆ ಹಂಚಿ ದೇಶವನ್ನು ಜೀರ್ಣೋದ್ಧಾರಮಾಡುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಅದಕ್ಕೆ ಹುಲ್ಲುಗಾವಲಾಗುವವು.


ಯೆಹೋವನು ಬಡವರ ಮೊರೆಗೆ ಲಕ್ಷ್ಯಕೊಡುವನು; ಸೆರೆಯಲ್ಲಿರುವ ತನ್ನವರನ್ನು ತಿರಸ್ಕರಿಸುವದಿಲ್ಲ.


ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.


ಮತ್ತು ಆತನು ಅವರಿಗೆ - ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ; ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರಿಗಿ ಕಟ್ಟುವರು. ನೀವು ತಲತಲಾಂತರಗಳಿಂದ ಪಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; ಬಿದ್ದ ಗೋಡೆಯನ್ನು ಹಾಕುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ, ಎಂಬೀ ಬಿರುದುಗಳು ನಿಮಗುಂಟಾಗುವವು.


ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಗೊಡದೆ ಬದುಕಿಸಿದಿಯಲ್ಲಾ.


ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನೀನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು ಎಂದು ಹೇಳಿದನು.


ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ; ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ; ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಅನ್ನರು.


ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ದೊಸಕೊಂಡನು.


ಆ ಸಾವಿರ ವರುಷ ತೀರುವ ತನಕ ಸೈತಾನನು ಇನ್ನೂ ಜನಗಳನ್ನು ಮರುಳುಗೊಳಿಸದ ಹಾಗೆ ದೇವದೂತನು ಅವನನ್ನು ಅಧೋಲೋಕದಲ್ಲಿ ದೊಬ್ಬಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗಬೇಕು.


ರಾಜನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನಾಗುವದೋ ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತಲ್ಲಾ; ರಹಸ್ಯಗಳನ್ನು ವ್ಯಕ್ತಗೊಳಿಸುವಾತನು ಮುಂದಾಗುವದನ್ನು ನಿನಗೆ ಗೋಚರಮಾಡಿದ್ದಾನೆ.


ನೀನು ನಿನ್ನ ತಂದೆಯಾದ ದಾವೀದನಂತೆ ನನಗೆ ವಿಧೇಯನಾಗಿ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುವದಾದರೆ


ಇಂಥ ಹುಚ್ಚುತನವನ್ನು ಮಾಡಬೇಡ. ಈ ಅಪಮಾನವನ್ನು ಮರೆಮಾಡುವದು ಹೇಗೆ? ನಿನಗಂತೂ ಇಸ್ರಾಯೇಲ್ಯರಲ್ಲಿ ನೀಚನೆಂಬ ಹೆಸರು ತಪ್ಪದು. ಆದದರಿಂದ ದಯವಿಟ್ಟು ಅರಸನ ಸಂಗಡ ಮಾತಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು ಎಂದಳು.


ತಂದೆಯೇ, ಅಬ್ರಹಾಮನೇ, ನನ್ನ ಮೇಲೆ ದಯವಿಟ್ಟು ಲಾಜರನನ್ನು ಕಳುಹಿಸು; ಅವನು ತನ್ನ ತುದಿಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ; ಈ ಉರಿಯಲ್ಲಿ ಸಂಕಟಪಡುತ್ತೇನೆ ಎಂದು ಕೂಗಿ ಹೇಳಿದನು.


ತಂದಿದ್ದ ಪಕ್ಷದಲ್ಲಿ ಆ ಯಜ್ಞ ಸಮರ್ಪಣೆಯು ನಿಂತುಹೋಗುತ್ತಿತ್ತಲ್ಲಾ. ಯಾಕಂದರೆ ದೇವಾರಾಧನೆ ಮಾಡುವವರು ಒಂದೇ ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಪಾಪವುಂಟೆಂದು ಅವರ ಮನಸ್ಸು ಇನ್ನೂ ಸಾಕ್ಷಿಕೊಡುವದು ಹೇಗೆ?


ದೇವರು ಎರಡು ಸಾರಿಯಲ್ಲದೆ ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.


ಇವರು ಬಂದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಿಸಿಕೊಂಡು ಅದರಲ್ಲಿ ಮುಚ್ಚಲ್ಪಟ್ಟಿದ್ದು ಬಹು ದಿನಗಳ ಮೇಲೆ ದಂಡನೆಗೆ ಗುರಿಯಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು