Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜೆಕರ್ಯ 9:2 - ಕನ್ನಡ ಸತ್ಯವೇದವು J.V. (BSI)

2 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹು ಜಾಣತನದವುಗಳು ಎಂದುಕೊಂಡಿರುವ ತೂರ್ ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂತೆಯೇ ದಮಸ್ಕದ ಪಕ್ಕದಲ್ಲಿರುವ ಹಮಾತಿನ ಮೇಲೆ, ತಾವೇ ಜಾಣರೆಂದು ಕೊಚ್ಚಿಕೊಳ್ಳುತ್ತಿರುವ ಟೈರ್ ಮತ್ತು ಸಿದೋನ್ ಪಟ್ಟಣಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಸಂದೇಶವು ಹಮಾತನಿಗೆ ವಿರುದ್ಧವಾದದ್ದು. ಅವನ ಮೊರೆಯು ಹದ್ರಾಕ್ ದೇಶಕ್ಕೆ ತಾಗಿ ಇದೆ. ಈ ಸಂದೇಶವು ತೂರ್ ಚೀದೋನಿನ ಜನರ ವಿರುದ್ಧವಾಗಿಯೂ ಇದೆ. ಆ ಜನರು ಜ್ಞಾನಿಗಳೂ ಕುಶಲಕರ್ಮಿಗಳೂ ಆಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜೆಕರ್ಯ 9:2
20 ತಿಳಿವುಗಳ ಹೋಲಿಕೆ  

ನರಪುತ್ರನೇ, ನೀನು ತೂರಿನ ಅರಸನ ವಿಷಯದಲ್ಲಿ ಶೋಕಗೀತವನ್ನೆತ್ತು, ಅವನಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಸರ್ವಸುಲಕ್ಷಣಶಿರೋಮಣಿ, ಪೂರ್ಣಜ್ಞಾನಿ, ಪರಿಪೂರ್ಣಸುಂದರ.


ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು.


ಸೆರೆಹೋಗಿರುವ ಆ ದಂಡಿನ ಇಸ್ರಾಯೇಲ್ಯರು ಕಾನಾನ್ಯರ ದೇಶವನ್ನು ಚಾರೆಪತಿನವರೆಗೆ ತಮ್ಮದಾಗಿ ಮಾಡಿಕೊಳ್ಳುವರು; ಸೆಪಾರದಿನಲ್ಲಿ ಸೆರೆಯಾಗಿರುವ ಯೆರೂಸಲೇವಿುನವರು ದಕ್ಷಿಣಪ್ರಾಂತದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಸೇನಾಧೀಶ್ವರದೇವರಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ಇಗೋ, ನಾನು ನಿಮಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು; ಅದು ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ತೊರೆಯ ತನಕ ನಿಮ್ಮನ್ನು ಜಜ್ಜಿಬಿಡುವದು.


ಅವನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ಫರೋಹ ನೆಕೋವನು ಇವನನ್ನು ಯೆರೂಸಲೇವಿುನಲ್ಲಿ ಬಹು ದಿವಸಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಅಮ್ಮೋನ್ಯರು, ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು,


ಏಕಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಕಳೆದುಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -


ಯೆಹೋವನು ಇಂತೆನ್ನುತ್ತಾನೆ - ದಮಸ್ಕವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಗಿಲ್ಯಾದನ್ನು ಕಬ್ಬಿಣದ ಹಂತಿ ಕುಂಟೆಗಳಿಂದ ಒಕ್ಕಿ ನುಗ್ಗುಮಾಡಿತಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು