Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:12 - ಕನ್ನಡ ಸತ್ಯವೇದವು J.V. (BSI)

12 ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ ನಾವೂ ಇವರನ್ನು ಜೀವದೊಡನೆ ನುಂಗಿಬಿಡುವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:12
15 ತಿಳಿವುಗಳ ಹೋಲಿಕೆ  

ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;


ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.


ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ.


ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ಕಿಸಿದು ಛೀಗುಟ್ಟಿ ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ ಇದು, ಬಂದೊದಗಿತು, ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಅರಿಚಾಟಕಿರಿಚಾಟವನ್ನು ಹೆಚ್ಚಿಸಿದ್ದಾನೆ.


[ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ಆತನು ಪರಲೋಕದಿಂದ ಸಹಾಯಮಾಡಿ ನಿಂದಕರ ಬಾಯಿಗೆ ನನ್ನನ್ನು ತಪ್ಪಿಸುವನು; ಸೆಲಾ. ತನ್ನ ಕಾರುಣ್ಯವನ್ನೂ ಸತ್ಯತೆಯನ್ನೂ ತೋರ್ಪಡಿಸುವನು.


ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ನುಂಗಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.


ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತಾಡಿದರೂ ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.


ಭೂವಿುಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತಷ್ಟೆ; ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲ್ಯರಿಗೆ ಎಚ್ಚರವುಂಟಾಗುವಂತೆ ಮಾಡಿತಲ್ಲಾ.


ಸಕಲವಿಧವಾದ ಅಮೂಲ್ಯಸಂಪತ್ತನ್ನು ಕಂಡುಹಿಡಿದು ಕೊಳ್ಳೆಮಾಡಿ ನಮ್ಮ ಮನೆಗಳಲ್ಲಿ ತುಂಬುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು