Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:15 - ಕನ್ನಡ ಸತ್ಯವೇದವು J.V. (BSI)

15 ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರೆ ಮಗನೇ, ಅವರೊಡನೆ ಸೇರಬೇಡ; ನೀನು ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಮಗನೇ, ಅವರ ಜೀವಿತವನ್ನು ಅನುಸರಿಸಬೇಡ. ಅವರ ಜೀವಿತಮಾರ್ಗದಲ್ಲಿ ಮೊದಲನೆ ಹೆಜ್ಜೆಯನ್ನೂ ಇಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮಗನೇ, ಅವರೊಂದಿಗೆ ಸೇರಬೇಡ, ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:15
14 ತಿಳಿವುಗಳ ಹೋಲಿಕೆ  

ನಿನ್ನ ವಾಕ್ಯವನ್ನೇ ಅನುಸರಿಸಬೇಕೆಂದು ನನ್ನ ಕಾಲುಗಳನ್ನು ಯಾವ ಕೆಟ್ಟ ದಾರಿಗೂ ಹೋಗದಂತೆ ಕಾದಿದ್ದೇನೆ.


ಯಾವನು ದುಷ್ಟರ ಆಲೋಚನೆಯಂತೆ ನಡೆಯದೆ ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ ಧರ್ಮನಿಂದಕರೊಡನೆ ಕೂತುಕೊಳ್ಳದೆ


ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ; ನಿನ್ನ ಕಾಲನ್ನು ಕೇಡಿಗೆ ದೂರಮಾಡು.


ಆದದರಿಂದ ಅನ್ಯಜನರ ಮಧ್ಯದಲ್ಲಿಂದ ಹೊರಟು ಬಂದು ಪ್ರತ್ಯೇಕವಾಗಿರಿ; ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ. ಅವಳ ಮನೆಬಾಗಿಲ ಹತ್ತಿರ ಹೋದೀಯೆ.


ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.


ಮೂಢರೇ, [ಮೂಢತ್ವವನ್ನು] ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ ಎಂದು ಪ್ರಬೋಧಿಸುತ್ತಾಳೆ.


ನಮ್ಮ ಸಂಗಡ ಪಾಲುಗಾರನಾಗು; ನಮ್ಮೆಲ್ಲರಿಗೂ ಹುದುವಾದ ಒಂದೇ ಹಮ್ಮಿಣಿ ಇರುವದು ಎಂದು ಹೇಳಿದರೆ


ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸದಿರು.


ಬಲಾತ್ಕಾರಿಯನ್ನು ನೋಡಿ ಹೊಟ್ಟೆಕಿಚ್ಚುಪಡದಿರು, ಅವನ ನಡತೆಯನ್ನು ಎಷ್ಟು ಮಾತ್ರಕ್ಕೂ ಅನುಸರಿಸಬೇಡ.


[ಕೇಳಿರಿ], ಸನ್ಮಾರ್ಗದಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ಕೊಲೆಯ ಮಾತಿಗೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು