Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:2 - ಕನ್ನಡ ಸತ್ಯವೇದವು J.V. (BSI)

2 ಇವುಗಳಿಂದ ಜನರು ಜ್ಞಾನವನ್ನೂ ಶಿಕ್ಷೆಯನ್ನೂ ಪಡೆದು ಬುದ್ಧಿವಾದಗಳನ್ನು ಗ್ರಹಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜ್ಞಾನವನ್ನೂ ಶಿಸ್ತನ್ನೂ ಪಡೆಯುವುದಕ್ಕೆ ಒಳನೋಟದ ಮಾತುಗಳನ್ನು ಗ್ರಹಿಸುವುದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೂ ಬುದ್ಧಿವಾದವನ್ನು ಗ್ರಹಿಸಿಕೊಳ್ಳುವುದಕ್ಕೂ ಈ ಜ್ಞಾನೋಕ್ತಿಗಳು ಸಹಾಯಕವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ; ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:2
13 ತಿಳಿವುಗಳ ಹೋಲಿಕೆ  

ಜ್ಞಾನವನ್ನು ಅಕ್ಕಾ ಎಂದು ಹೇಳು, ವಿವೇಕವನ್ನು ಆಪ್ತವಿುತ್ರಳೇ ಎಂದು ಕರೆ.


ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಅವನಿಗೆ ಬುದ್ಧಿಯೇ ಇಲ್ಲವಲ್ಲಾ.


ಮೂಢರೇ, ಜಾಣತನವನ್ನು ಕಲಿತುಕೊಳ್ಳಿರಿ, ಜ್ಞಾನಹೀನರೇ, ಬುದ್ಧಿಯನ್ನು ಗ್ರಹಿಸಿರಿ.


ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು; ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವದು ಲೇಸು.


ಮಕ್ಕಳಿರಾ, ತಂದೆಯ ಶಿಕ್ಷಣವನ್ನು ಕೇಳಿರಿ, ವಿವೇಕವನ್ನು ಗ್ರಹಿಸಲಿಕ್ಕೆ ಕಿವಿಗೊಡಿರಿ.


ಯೆಹೋವನ ಭಯವೇ ಜ್ಞಾನೋಪದೇಶ; ಗೌರವಕ್ಕೆ ಮೊದಲು ವಿನಯ.


ಹೀಗಿರಲು ನೀನು ನೀತಿನ್ಯಾಯಗಳನ್ನೂ ಧರ್ಮವನ್ನೂ ಅಂದರೆ ಸಕಲ ಸನ್ಮಾರ್ಗಗಳನ್ನು ತಿಳಿದುಕೊಳ್ಳುವಿ.


ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.


ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು