Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 1:5 - ಕನ್ನಡ ಸತ್ಯವೇದವು J.V. (BSI)

5 ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಂಡಿತ್ಯವನ್ನು ಹೊಂದುವನು, ವಿವೇಕಿಯು [ಮತ್ತಷ್ಟು] ಉಚಿತಾಲೋಚನೆಯುಳ್ಳವನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಡಿಂತ್ಯವನ್ನು ಹೊಂದುವನು, ವಿವೇಕಿಯು ಮತ್ತಷ್ಟು ಉಚಿತಾಲೋಚನೆಯನ್ನು ಹೊಂದುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈ ಜ್ಞಾನೋಕ್ತಿಗಳಿಗೆ ಕಿವಿಗೊಡುವುದರ ಮೂಲಕ ಜ್ಞಾನಿಗಳು ತಮ್ಮ ಪಾಂಡಿತ್ಯವನ್ನೂ ವಿವೇಕಿಗಳು ತಮ್ಮ ಉಚಿತಾಲೋಚನೆಗಳನ್ನೂ ಹೆಚ್ಚಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 1:5
18 ತಿಳಿವುಗಳ ಹೋಲಿಕೆ  

ತಿಳುವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ; ಪಶುಪ್ರಾಯನು ಗದರಿಕೆಯನ್ನು ದ್ವೇಷಿಸುತ್ತಾನೆ.


ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳುವಳಿಕೆಯನ್ನು ಪಡೆಯುವನು.


ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವದನ್ನು ನೀವೇ ಯೋಚಿಸಿರಿ.


ನಿನಗೆ ವಿವೇಕವಿದ್ದರೆ ಇದನ್ನು ಕೇಳು, ನನ್ನ ಮಾತುಗಳ ಧ್ವನಿಗೆ ಕಿವಿಗೊಡು!


ಹೀಗಿರಲು, ಬುದ್ಧಿವಂತರೇ, ನನ್ನ ಮಾತುಗಳನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡಾನೆಂಬ ಯೋಚನೆಯೂ ಸರ್ವಶಕ್ತನು ಅನ್ಯಾಯವನ್ನು ನಡಿಸಾನೆಂಬ ಭಾವನೆಯೂ ದೂರವಾಗಿರಲಿ!


ಬುದ್ಧಿವಂತರೂ ನನ್ನ ಕಡೆಗೆ ಕಿವಿಗೊಡುವ ಪ್ರತಿಯೊಬ್ಬ ಜ್ಞಾನಿಯೂ [ನಿನ್ನ ವಿಷಯವಾಗಿ] -


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಧರ್ಮನಿಂದಕನಿಗೆ ಹುಡುಕಿದರೂ ಜ್ಞಾನವು ಸಿಕ್ಕದು; ವಿವೇಕಿಗೆ ತಿಳುವಳಿಕೆಯು ಸುಲಭವಾಗಿ ದೊರೆಯುವದು.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ಇವುಗಳನ್ನು ಕೈಕೊಂಡು ಅನುಸರಿಸಿರಿ. ಅನುಸರಿಸಿದರೇ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಅವರು ಈ ಆಜ್ಞೆಗಳ ವಿಷಯದಲ್ಲಿ ವರ್ತಮಾನವನ್ನು ಕೇಳಿ - ಈ ದೊಡ್ಡ ಜನಾಂಗವು ಜ್ಞಾನ ವಿವೇಕವುಳ್ಳ ಜನಾಂಗ ಎಂದು ಮಾತಾಡಿಕೊಳ್ಳುವರು.


ವಿವೇಕಿಗಳೇ, ನನ್ನ ಮಾತುಗಳನ್ನು ಕೇಳಿರಿ, ಜ್ಞಾನಿಗಳೇ, ನನಗೆ ಕಿವಿಗೊಡಿರಿ!


ಉಪದೇಶವನ್ನು ಕೇಳಿರಿ, ಅದನ್ನು ಬಿಡದೆ ಜ್ಞಾನವಂತರಾಗಿರಿ.


ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು; ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.


ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುವದು; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುವದು.


ಧರ್ಮನಿಂದಕನಿಗೆ ಪೆಟ್ಟುಹೊಡೆ, [ನೋಡಿದ] ಮಂದಮತಿಯು ಜಾಣನಾಗುವನು; ವಿವೇಕಿಯನ್ನು ಗದರಿಸು, ತಾನೇ ತಿಳುವಳಿಕೆಯನ್ನು ಗ್ರಹಿಸುವನು.


ಧರ್ಮನಿಂದಕನಿಗೆ ದಂಡನೆಯಾದರೆ [ನೋಡಿದ] ಮಂದಮತಿಯು ಜ್ಞಾನವನ್ನು ಪಡೆಯುವನು; ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳುವಳಿಕೆಯನ್ನು ಹೊಂದುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು