Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:1 - ಕನ್ನಡ ಸತ್ಯವೇದವು J.V. (BSI)

1 ಸೊಲೊಮೋನನ ಜ್ಞಾನೋಕ್ತಿಗಳು. ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಜ್ಞಾನಿಯಾದ ಮಗನಿಂದ ತಂದೆಗೆ ಆನಂದ, ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವು ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:1
16 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಅರಸನಾಗಿದ್ದ ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು.


ಜ್ಞಾನಾಸಕ್ತನು ತಂದೆಯನ್ನು ಹರ್ಷಗೊಳಿಸುವನು; ವೇಶ್ಯಾಸಂಗಿಯು ಆಸ್ತಿಯನ್ನು ಹಾಳುಮಾಡಿಕೊಳ್ಳುವನು.


ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ, ತಾಯಿಗೆ ಕರಕರೆ.


ಬೆತ್ತಬೆದರಿಕೆಗಳಿಂದ ಜ್ಞಾನವುಂಟಾಗುವದು; ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.


ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು; ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.


ಹೆಡ್ಡನನ್ನು ಹೆತ್ತವನಿಗೆ ವ್ಯಥೆ, ಮೂರ್ಖನ ತಂದೆಗೆ ವ್ಯಸನ.


ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಹೆಂಡತಿಯ ತಂಟೆಯು ತಟತಟನೆ ತೊಟ್ಟಿಕ್ಕುವ ಹನಿ.


ಮತ್ತು ಪ್ರಸಂಗಿಯು ಜ್ಞಾನಿಯಾಗಿದ್ದದ್ದಲ್ಲದೆ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ ಪರೀಕ್ಷಿಸಿ ಕ್ರಮಪಡಿಸಿದನು.


ಅವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವದರಲ್ಲಿ ಜ್ಞಾನವನ್ನೂ ಪ್ರಯಾಸವನ್ನೂ ವ್ರಯಮಾಡಿದ್ದೇನೋ ಅದರ ಮೇಲೆ ದೊರೆತನ ಮಾಡುವನು. ಇದೂ ವ್ಯರ್ಥ.


ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು; ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಇವುಗಳನ್ನು ಸಂಗ್ರಹಿಸಿ ಬರೆದರು.


ಅವನ ಜ್ಞಾನೋಕ್ತಿಗಳು ಮೂರು ಸಾವಿರ; ಗೀತಗಳು ಸಾವಿರದ ಐದು.


ಜ್ಞಾನಿಯಾದ ಮಗನು ತಂದೆಯ ಶಿಕ್ಷೆಯನ್ನು ಕೇಳುವನು: ಧರ್ಮನಿಂದಕನೋ ಗದರಿಕೆಯನ್ನು ಕೇಳನು.


ಮಗನೇ, ಜ್ಞಾನವನ್ನು ಪಡೆದುಕೊಂಡು ನನ್ನ ಮನಸ್ಸನ್ನು ಸಂತೋಷಪಡಿಸು; ಹಾಗಾದರೆ, ನನ್ನನ್ನು ದೂರುವವನಿಗೆ ನಾನು ಉತ್ತರ ಕೊಡಲಾಗುವದು.


ಮಗನನ್ನು ಶಿಕ್ಷಿಸು; ನಿನ್ನನ್ನು ಸುಧಾರಿಸುವನು; ಅವನೇ ನಿನ್ನ ಆತ್ಮಕ್ಕೆ ಮೃಷ್ಟಾನ್ನವಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು