Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:10 - ಕನ್ನಡ ಸತ್ಯವೇದವು J.V. (BSI)

10 ಕಣ್ಣುವಿುಟಕಿಸುವವನು ಕಷ್ಟಕರನು; ಧೈರ್ಯದಿಂದ ಗದರಿಸುವವನು ಸಮಾಧಾನಕರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸತ್ಯವನ್ನು ಅಡಗಿಸಿಕೊಳ್ಳುವವನು ತೊಂದರೆಯನ್ನು ಉಂಟುಮಾಡುವನು. ಧೈರ್ಯದಿಂದ ಮಾತಾಡುವವನು ಸಮಾಧಾನಕರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುರುದ್ದೇಶದಿಂದ ಕಣ್ಣು ಮಿಟಕಿಸುವವನು ದುಃಖವನ್ನು ಉಂಟುಮಾಡುತ್ತಾನೆ, ಆದರೆ ಹರಟೆಯ ಮೂರ್ಖನು ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:10
9 ತಿಳಿವುಗಳ ಹೋಲಿಕೆ  

ನಿರ್ನಿವಿುತ್ತ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಅವಕಾಶಕೊಡಬೇಡ; ನಿಷ್ಕಾರಣವೈರಿಗಳ ಕಣ್ಣುಸನ್ನೆಗೆ ಆಸ್ಪದ ಕೊಡಬೇಡ.


ಕಣ್ಣನ್ನು ವಿುಟಕಿಸುತ್ತಾನೆ, ಕಾಲಿನಿಂದ ಕೆರೆಯುತ್ತಾನೆ, ಬೆರಳ ಸನ್ನೆಮಾಡುತ್ತಾನೆ.


ಅವನು ಹರಟೆಕೊಚ್ಚುವವನಾಗಿ ನಮ್ಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ತಾನು ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ ಒಳ್ಳೇ ನಡತೆಯನ್ನು ಅನುಸರಿಸು;


ಜ್ಞಾನಹೃದಯನು ಆಜ್ಞೆಗಳನ್ನು ವಹಿಸುವನು; ಹರಟೆಯ ಮೂರ್ಖನು ಕೆಡವಲ್ಪಡುವನು.


ಜೀವನಮರಣಗಳು ನಾಲಿಗೆಯ ವಶ, ವಚನಪ್ರಿಯರು ಅದರ ಫಲವನ್ನು ಅನುಭವಿಸುವರು.


ನಿನ್ನ ಹೃದಯವು ಏಕೆ ನಿನ್ನನ್ನು ಸೆಳೆದುಕೊಂಡು ಹೋಗುವದು? ನಿನ್ನ ಕಣ್ಣುಗಳು ಕಿಡಿಕಿಡಿಯಾಗುವದೇಕೆ? ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು


ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವದಿಲ್ಲ, ಮೂರ್ಖನ ಭಾಷಣ ಸಮೀಪನಾಶನ.


ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಗಳನ್ನು ಕಲ್ಪಿಸುವನು; ತುಟಿಯನ್ನು ಮಡಸಿಕೊಳ್ಳುವವನು ಕೇಡನ್ನು ಸಾಧಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು