Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:12 - ಕನ್ನಡ ಸತ್ಯವೇದವು J.V. (BSI)

12 ದ್ವೇಷವು ಜಗಳಗಳನ್ನೆಬ್ಬಿಸುತ್ತದೆ; ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದ್ವೇಷವು ವಾದವನ್ನು ಉಂಟುಮಾಡುತ್ತದೆ. ಆದರೆ ಪ್ರೀತಿಯು ಎಲ್ಲಾ ತಪ್ಪುಗಳನ್ನು ಕ್ಷಮಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:12
10 ತಿಳಿವುಗಳ ಹೋಲಿಕೆ  

ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ದೋಷವನ್ನು ಮುಚ್ಚಿಡುವವನು ಪ್ರೇಮವನ್ನು ಸೆಳೆಯುವನು; ಎತ್ತಿ ಆಡುತ್ತಿರುವವನು ಸ್ನೇಹವನ್ನು ಕಳೆದುಕೊಳ್ಳುವನು.


ಕೋಪಿಷ್ಟನು ವ್ಯಾಜ್ಯವನ್ನೆಬ್ಬಿಸುವನು; ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.


ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಹುಟ್ಟುತ್ತವೆ? ನಿಮ್ಮ ಇಂದ್ರಿಯಗಳಲ್ಲಿ ಹೋರಾಡುವ ಭೋಗಾಶೆಗಳಿಂದಲೇ ಅಲ್ಲವೇ.


ಆಸೆಬಡುಕನು ಜಗಳವನ್ನೆಬ್ಬಿಸುವನು; ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ನೀಚನು ಕೇಡೆಂಬ ಕುಣಿಯನ್ನು ತೋಡುತ್ತಾನೆ; ಅವನ ತುಟಿಗಳಲ್ಲಿ ಬೆಂಕಿಯುರಿಯುತ್ತದೆ.


ಕೋಪಿಷ್ಠನು ಜಗಳವನ್ನೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.


ಹಾಲು ಕಡೆಯುವದರಿಂದ ಬೆಣ್ಣೆ, ಮೂಗು ಹಿಂಡುವದರಿಂದ ರಕ್ತ, ಕೋಪಕಲಕುವದರಿಂದ ಜಗಳ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು