Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:13 - ಕನ್ನಡ ಸತ್ಯವೇದವು J.V. (BSI)

13 ವಿವೇಕಿಯ ತುಟಿಗಳಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ವಿವೇಕಿಯ ತುಟಿಗಳಿಂದ ಜ್ಞಾನ, ಬುದ್ಧಿಹೀನನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬುದ್ಧಿವಂತನು ವಿವೇಕದಿಂದ ಮಾತಾಡುತ್ತಾನೆ. ಆದರೆ ಬುದ್ಧಿಹೀನನಿಗೆ ಹೊಡೆತ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:13
18 ತಿಳಿವುಗಳ ಹೋಲಿಕೆ  

ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನ ಬೆನ್ನಿಗೆ ಬೆತ್ತ.


ವ್ಯಭಿಚಾರಿಯೋ ಕೇವಲ ಬುದ್ಧಿಶೂನ್ಯನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.


ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ ಮೂರ್ಖತನವು ಅವನಿಂದ ತೊಲಗದು.


ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯಾಭರಣ.


ಧರ್ಮನಿಂದಕರಿಗೆ [ದಂಡನೆಯ] ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.


ಮಂದನಿಗೆ ನೂರು ಪೆಟ್ಟು ಹೊಡೆಯುವದಕ್ಕಿಂತಲೂ ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.


ತಕ್ಕ ಉತ್ತರಕೊಡುವವನಿಗೆ ಎಷ್ಟೋ ಉಲ್ಲಾಸ! ಸಮಯೋಚಿತವಾದ ವಚನದಲ್ಲಿ ಎಷ್ಟೋ ಸ್ವಾರಸ್ಯ!


ಜ್ಞಾನಿಗಳ ತುಟಿಗಳು ತಿಳುವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವದೇ ಇಲ್ಲ.


ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವದು; ನೀಚನ ನಾಲಿಗೆ ಕತ್ತರಿಸಲ್ಪಡುವದು.


ಶಿಷ್ಟರ ಭಾಷಣ ಬಹುಜನಪೋಷಣ; ಬುದ್ಧಿಯ ಕೊರತೆ ಮೂರ್ಖರ ನಾಶನ.


[ಆದದರಿಂದ] ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರುಕಡಿವಾಣಗಳಿಂದಲ್ಲದೆ ಸ್ವಾಧೀನವಾಗುವದಿಲ್ಲವಷ್ಟೆ.


ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.


ಹೋರಿಯು ವಧ್ಯಸ್ಥಾನಕ್ಕೆ ಹೋಗುವ ಹಾಗೂ ಬೇಡಿಬಿದ್ದಿರುವ ಮೂರ್ಖನು ದಂಡನೆಗೆ ನಡೆಯುವಂತೆಯೂ ಪಕ್ಷಿಯು ಬಲೆಯ ಕಡೆಗೆ ಓಡುವ ಮೇರೆಗೂ


ಆಗ ಯೆಹೋವನು ಮೋಶೆಗೆ - ಐಗುಪ್ತದೇಶದ ಮೇಲೆ ನಿನ್ನ ಕೈಚಾಚಿ ವಿುಡಿತೆಗಳನ್ನು ಬರಮಾಡು; ಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ವಿುಡಿತೆಗಳು ತಿಂದುಬಿಡಲಿ ಎಂದು ಹೇಳಿದನು.


ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ; ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.


ಜ್ಞಾನಹೃದಯರಿಗೆ ಜಾಣರೆಂಬ ಬಿರುದು ಬರುವದು; ಸವಿತುಟಿಯಿಂದ ಉಪದೇಶಶಕ್ತಿಯು ಹೆಚ್ಚುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು