Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:24 - ಕನ್ನಡ ಸತ್ಯವೇದವು J.V. (BSI)

24 ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವದು; ಶಿಷ್ಟನಿಗೆ ಇಷ್ಟವು ಲಭಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವುದು, ಶಿಷ್ಟನಿಗೆ ಇಷ್ಟವು ಲಭಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕೆಡುಕನಿಗೆ ಅವನು ಭಯಪಡುವುದೇ ಸಂಭವಿಸುವುದು. ಒಳ್ಳೆಯವನಾದರೋ ತನಗೆ ಬೇಕಾದದ್ದನ್ನೆಲ್ಲ ಪಡೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:24
16 ತಿಳಿವುಗಳ ಹೋಲಿಕೆ  

ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ; ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರಿಗೆ ತೃಪ್ತಿಯಾಗುವದು.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.


ಅಪಾಯಗಳ ಸಪ್ಪಳವು ಅವನ ಕಿವಿಯಲ್ಲೇ ಇರುವದು, ತಾನು ಸುಖವಾಗಿರುವಾಗಲೂ ಸೂರೆಗಾರನು ತನ್ನ ಮೇಲೆ ಬೀಳುವನೆಂದು ಭಯಪಡುವನು.


ಅತ್ಯಂತ ಭಯದಿಂದ ಎದುರುನೋಡತಕ್ಕ ನ್ಯಾಯತೀರ್ಪೂ ದೇವರ ವಿರೋಧಿಗಳನ್ನು ದಹಿಸುವ ತೀಕ್ಷ್ಣವಾದ ಅಗ್ನಿಯೂ ಇವೇ ನಮ್ಮ ಮುಂದೆ ಇರುವವು.


ನೀವು ಇದುವರೆಗೆ ನನ್ನ ಹೆಸರಿನ ಮೇಲೆ ಯಾವದೊಂದನ್ನೂ ಬೇಡಿಕೊಂಡಿಲ್ಲ; ಬೇಡಿಕೊಳ್ಳಿರಿ, ನಿಮಗೆ ಸಿಕ್ಕುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.


ನಾನು ನಿಮ್ಮನ್ನು ಅನಾಥರಾಗಿ ಬಿಡುವದಿಲ್ಲ; ನಿಮ್ಮ ಬಳಿಗೆ ಬರುತ್ತೇನೆ.


ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ.


ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವದು. ನಾನು ಯಾವದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವದು.


ಆಗ ಯೆಹೋವನಲ್ಲಿ ಸಂತೋಷಿಸುವಿ; ಮತ್ತು ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.


ಆದಕಾರಣ ಬಿರುಗಾಳಿಯಂತೆ ಅಪಾಯವೂ ತುಫಾನಿನಂತೆ ಆಪತ್ತೂ ಬಂದು ನಿಮಗೆ ಶ್ರಮಸಂಕಟಗಳು ಸಂಭವಿಸುವಾಗ


ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯಮಾಡುವೆನು.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.


ಇದೆಲ್ಲಾ ರಾಜನಾದ ನೆಬೂಕದ್ನೆಚ್ಚರನ ಅನುಭವಕ್ಕೆ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು