Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:25 - ಕನ್ನಡ ಸತ್ಯವೇದವು J.V. (BSI)

25 ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬಿರುಗಾಳಿ ಬೀಸಿದರೆ ದುಷ್ಟನು ಎಲ್ಲೋ! ಶಿಷ್ಟನು ಶಾಶ್ವತವಾದ ಕಟ್ಟಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವನು ಸದಾಕಾಲ ಬಲವಾಗಿ ನಿಲ್ಲುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:25
20 ತಿಳಿವುಗಳ ಹೋಲಿಕೆ  

ಅವನು ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಯ ಕೇಡಿಗಾಗಿ ಲಂಚತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವದಿಲ್ಲ.


ಇನ್ನೂ ಬೇಯದಿರುವಾಗಲೇ ಒಲೆಗಿಕ್ಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.


ಯಾವನೂ ದುಷ್ಟತನದಿಂದ ಸ್ಥಿರನಾಗನು; ಶಿಷ್ಟನು ಯಾವಾಗಲೂ ದೃಢಮೂಲನೇ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂವಿುಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವದು.


ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು; ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವದು.


ನಿಮ್ಮ ಅಪಾಯದಲ್ಲಿ ನಾನೂ ನಗುವೆನು; ನಿಮ್ಮ ಆಪತ್ತಿನಲ್ಲಿ ಪರಿಹಾಸ್ಯಮಾಡುವೆನು.


ಅವರು ಗಾಳಿಗೆ ಸಿಕ್ಕಿಬಿದ್ದ ಹುಲ್ಲಿನಂತೆ ಆದದ್ದು ಎಷ್ಟು ಸರ್ತಿ? ಎಷ್ಟಾವರ್ತಿ ಬಿರುಗಾಳಿಯು ಕೊಚ್ಚಿಕೊಂಡು ಹೋಗುವ ಹೊಟ್ಟಿನಂತಿದ್ದರು?


ಶಿಷ್ಟರು ಎಂದಿಗೂ ಕದಲರು; ದುಷ್ಟರು ದೇಶದಲ್ಲಿ ನಿಲ್ಲರು.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಅವನು ಸ್ವಪ್ನದಂತೆ ಹಾರಿಹೋಗಿ ಸಿಕ್ಕುವದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.


ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ ಅವರ ರಕ್ತದಲ್ಲಿ ಕಾಲಾಡಿಸುವರು.


ಯೆಹೋವನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವದಿಲ್ಲ, ಸದಾ ಸ್ಥಿರವಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು