Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:29 - ಕನ್ನಡ ಸತ್ಯವೇದವು J.V. (BSI)

29 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಸನ್ಮಾರ್ಗಿಗೆ ಸರ್ವೇಶ್ವರನೆ ಆಶ್ರಯ; ಕೆಡುಕನಿಗೆ ಆತನೆ ಪ್ರಳಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನು ಒಳ್ಳೆಯವರನ್ನು ಕೋಟೆಯಂತೆ ಕಾಪಾಡುತ್ತಾನೆ, ಕೆಡುಕರನ್ನಾದರೋ ನಾಶಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:29
16 ತಿಳಿವುಗಳ ಹೋಲಿಕೆ  

ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ; ಕೆಡುಕರಿಗೆ ಕೇಡು.


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಅವರು ಯೆಹೋವನಲ್ಲಿ ಬಲಗೊಳ್ಳುವರು, ಆತನ ಹೆಸರಿನಲ್ಲಿ ನಡೆದುಕೊಳ್ಳುವರು; ಇದು ಯೆಹೋವನ ನುಡಿ.


ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು.


ದುಷ್ಟರು ಹುಲ್ಲಿನಂತೆ ಬೆಳೆಯುವದೂ ಕೆಡುಕರು ಹೂವಿನಂತೆ ಮೆರೆಯುವದೂ ತೀರಾ ಹಾಳಾಗುವದಕ್ಕಾಗಿಯೇ.


ಅವರು ಹೆಚ್ಚುಹೆಚ್ಚಾಗಿ ಬಲಹೊಂದಿ ಚೀಯೋನ್‍ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ -


ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.


ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.


ಆತನು ಅನ್ಯಾಯಗಾರರಿಗೆ ವಿಪತ್ತನ್ನೂ ಕೆಡುಕರಿಗೆ ಉಪದ್ರವವನ್ನೂ ಕೊಡುವನಲ್ಲವೆ.


ಧರ್ಮವು ನಿರ್ದೋಷಿಯನ್ನು ಕಾಯುವದು; ಅಧರ್ಮವು ದೋಷಿಯನ್ನು ಕೆಡವಿಬಿಡುವದು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವದು; ಬಲದ ಮೇಲಣ ನಂಬಿಕೆಯು ಬಿದ್ದುಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು