Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:31 - ಕನ್ನಡ ಸತ್ಯವೇದವು J.V. (BSI)

31 ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವದು; ನೀಚನ ನಾಲಿಗೆ ಕತ್ತರಿಸಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸಜ್ಜನರ ಬಾಯಲ್ಲಿ ಜ್ಞಾನ ಮೊಳೆಯುವುದು; ನೀಚನ ನಾಲಿಗೆಯೂ ಕತ್ತರಿಸಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಒಳ್ಳೆಯವರು ಯಾವಾಗಲೂ ಜ್ಞಾನದ ಮಾತುಗಳನ್ನು ಹೇಳುತ್ತಾರೆ; ಕೆಡುಕರ ಮಾತನ್ನು ಜನರು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:31
10 ತಿಳಿವುಗಳ ಹೋಲಿಕೆ  

ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ; ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.


ವಿವೇಕಿಯ ತುಟಿಗಳಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.


ಶಿಷ್ಟನ ಬಾಯಿ ಜೀವದ ಬುಗ್ಗೆ; ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.


ಅರಸನೋ ದೇವರಲ್ಲಿ ಆನಂದಿಸುವನು. ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವದನ್ನು ಕಂಡು ಹಿಗ್ಗುವರು.


ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ ಕೊಬ್ಬಿನಿಂದಲೂ ಅವರಿಗೆ ವಿರೋಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.


ವಕ್ರಹೃದಯನು ಶುಭವನ್ನು ಪಡೆಯನು; ಕೆಟ್ಟನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.


ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿ ಪೂರ್ವಕವಾಗಿ ಹೇಳುವದು.


ಅವರು - ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾವನು ಎಂದು ಹೇಳಿಕೊಳ್ಳುತ್ತಾರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು