Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:32 - ಕನ್ನಡ ಸತ್ಯವೇದವು J.V. (BSI)

32 ಶಿಷ್ಟನ ತುಟಿಯಲ್ಲಿ ಉಚಿತವಚನ; ದುಷ್ಟನ ಬಾಯಲ್ಲಿ ನೀಚವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಶಿಷ್ಟನ ತುಟಿಯಲ್ಲಿ ಹಿತವಚನ, ದುಷ್ಟನ ಬಾಯಲ್ಲಿ ನೀಚವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಒಳ್ಳೆಯವನು ಯೋಗ್ಯವಾದವುಗಳನ್ನು ಹೇಳುವನು. ಕೆಡುಕನು ಸುಳ್ಳನ್ನು ಮಾತ್ರ ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:32
13 ತಿಳಿವುಗಳ ಹೋಲಿಕೆ  

ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ; ದುಷ್ಟನ ಬಾಯಿ ಕೆಟ್ಟದ್ದನ್ನು ಕಕ್ಕುತ್ತದೆ.


ಕತ್ತಿ ತಿವಿದ ಹಾಗೆ ದುಡುಕಿ ಮಾತಾಡುವವರುಂಟು; ಮತಿವಂತರ ಮಾತೇ ಮದ್ದು.


ಕೆಟ್ಟವರ ಮಾತು ರಕ್ತಕ್ಕೆ ಹೊಂಚು; ಯಥಾರ್ಥವಂತರ ನುಡಿ ರಕ್ಷಣೆ.


ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವದು, ಕೆಟ್ಟವರ ಬಾಯಿಂದ ಕೆಡವಲ್ಪಡುವದು.


ಇದರಿಂದ ನೀನು ದುರ್ಮಾರ್ಗದಿಂದಲೂ ಕೆಟ್ಟ ಮಾತನಾಡುವವರಿಂದಲೂ ತಪ್ಪಿಸಿಕೊಳ್ಳುವಿ.


ಪ್ರಸಂಗಿಯು ಯಥಾರ್ಥಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.


ಜ್ಞಾನಿಗಳ ನಾಲಿಗೆಯು ತಿಳುವಳಿಕೆಯನ್ನು ಸಾರ್ಥಕ ಮಾಡುವದು; ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಕ್ಕುವದು.


ಆಗ ನಮ್ಮನ್ನು ಎದುರಿಸುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವದಕ್ಕೆ ಅವಕಾಶವಿಲ್ಲದೆ ನಾಚಿಕೊಳ್ಳುವರು.


ಆದಕಾರಣ, ಅರಸೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ - ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು ಎಂದರಿಕೆ ಮಾಡಿದನು.


ಜ್ಞಾನಿಯ ಮಾತು ಹಿತ; ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವದು.


ಸೊಟ್ಟ ಮಾತುಗಳನ್ನು ನಿನ್ನಿಂದ ತೊಲಗಿಸಿಬಿಡು, ತುಟಿಗಳ ವಕ್ರತೆಯನ್ನು ದೂರಮಾಡು.


ನೀಚನೂ ದುಷ್ಟನೂ ಆಗಿರುವ ಅವನ ನಡತೆಯನ್ನು ನೋಡು; ಸೊಟ್ಟು ಬಾಯಿಯವನಾಗಿದ್ದಾನೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು