Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:4 - ಕನ್ನಡ ಸತ್ಯವೇದವು J.V. (BSI)

4 ಜೋಲುಗೈ ದಾರಿದ್ರ್ಯ; ಚುರುಕುಗೈ ಐಶ್ವರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೋಲುಗೈ ತರುತ್ತದೆ ದಾರಿದ್ರ್ಯ; ಚುರುಕು ಕೈ ತರುತ್ತದೆ ಐಶ್ವರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೋಮಾರಿಯು ಬಡವನಾಗಿರುತ್ತಾನೆ. ಕಷ್ಟಪಟ್ಟು ಕೆಲಸ ಮಾಡುವವನು ಐಶ್ವರ್ಯವಂತನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:4
19 ತಿಳಿವುಗಳ ಹೋಲಿಕೆ  

ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ; ಆತುರಪಡುವವರಿಗೆಲ್ಲಾ ಕೊರತೆಯೇ.


ಮೈಗಳ್ಳನು ಮಳೆಗಾಲದಲ್ಲಿ ಹೊಲಗೇಯನು; ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವದು; ಸೋಮಾರಿಯು ಹಸಿವೆಗೊಳ್ಳುವನು.


ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.


ನಿದ್ರಾನಿರತನಾಗಿರಬೇಡ! ಬಡವನಾದೀಯೆ; ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.


ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ ತಿರಿಗಿ ಬಾಯ ಹತ್ತಿರಕ್ಕೆ ತರಲಾರನು.


ಚುರುಕುಗೈಯವನಿಗೆ ರಾಜ್ಯಾಧಿಕಾರ; ಮೈಗಳ್ಳನಿಗೆ ಬಿಟ್ಟಿಯ ಬದುಕು.


ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ; ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಸೋಮಾರಿತನದಿಂದ ತೊಲೆಗಳು ಬೊಗ್ಗುವವು, ಜೋಲುಗೈಯಿಂದ ಮನೆ ಸೋರುವದು.


ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು; ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.


ಮೈಗಳ್ಳನು ಹಿಡಿದ ಬೇಟೆಯನ್ನೂ ಬೇಯಿಸನು; ಚಟುವಟಿಕೆಯವನಿಗೆ ಅಮೂಲ್ಯಸಂಪತ್ತು ದೊರಕುವದು.


ಕೆಲಸಗಳ್ಳನು ಕೆಡುಕನಿಗೆ ತಮ್ಮ.


ಅದೇ ದಿನದಲ್ಲಿ ಇಸಾಕನ ಸೇವಕರು ಬಂದು - ನಮಗೆ ನೀರು ಸಿಕ್ಕಿತು ಎಂದು ಹೇಳಿ ತಾವು ತೋಡಿದ್ದ ಬಾವಿಯ ಸಂಗತಿಯನ್ನು ತಿಳಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು