Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:5 - ಕನ್ನಡ ಸತ್ಯವೇದವು J.V. (BSI)

5 ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು; ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು, ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತ; ಕೊಯ್ಲಿನಲ್ಲಿ ತೂಕಡಿಸುವವನು ಲಜ್ಜೆಗೆಡುಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬುದ್ಧಿವಂತನು ತಕ್ಕಕಾಲದಲ್ಲಿ ಬೆಳೆಯನ್ನು ಕೊಯ್ಯುತ್ತಾನೆ. ಸುಗ್ಗೀಕಾಲದಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಬೇಸಿಗೆಯಲ್ಲಿ ಫಸಲನ್ನು ಕೂಡಿಸುವವರು ಬುದ್ಧಿವಂತ ಮಕ್ಕಳು, ಸುಗ್ಗಿಯಲ್ಲಿ ನಿದ್ರೆ ಮಾಡುವವರು ನಾಚಿಕೆಗೆಟ್ಟ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:5
10 ತಿಳಿವುಗಳ ಹೋಲಿಕೆ  

ಸುಗ್ಗಿಯಲ್ಲಿ ತನ್ನ ತೀನಿಯನ್ನು ಕೂಡಿಸಿಡುವದು, ಕೊಯ್ಲಿನ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವದು.


ಇರುವೆಗಳು ದುರ್ಬಲಜಾತಿಯಾದರೂ ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಅಣಿಮಾಡಿಕೊಳ್ಳುವವು.


ತಂದೆಯನ್ನು ಹೊಡೆದು ತಾಯಿಯನ್ನು ಓಡಿಸುವ ಮಗನು ನಾಚಿಕೆಯನ್ನೂ ಅವಮಾನವನ್ನೂ ಉಂಟುಮಾಡುವನು.


ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರಮಾಡುವನು; ಮನೆಮಕ್ಕಳೊಂದಿಗೆ ಬಾಧ್ಯತೆಯನ್ನು ಹೊಂದುವನು.


ಗುಣವಂತೆಯು ಪತಿಯ ತಲೆಗೆ ಕಿರೀಟ; ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.


ಸೋಮಾರಿಯೇ, ಇರುವೆಯ ಹತ್ತಿರ ಹೋಗಿ ಅದರ ನಡವಳಿಕೆಯನ್ನು ನೋಡಿ ಜ್ಞಾನವನ್ನು ತಂದುಕೋ.


ಜೋಲುಗೈ ದಾರಿದ್ರ್ಯ; ಚುರುಕುಗೈ ಐಶ್ವರ್ಯ.


ಶಿಷ್ಟನ ತಲೆ ಆಶೀರ್ವಾದದ ನೆಲೆ; ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.


ಹುಲ್ಲನ್ನು [ಕೊಯ್ದು] ಹೊತ್ತುಕೊಂಡು ಬಂದ ಮೇಲೆ ಹಸಿಹುಲ್ಲು ತಲೆದೋರುವದು; ಬೆಟ್ಟಗಳ ಸೊಪ್ಪನ್ನೂ ಕೂಡಿಸಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು