Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:6 - ಕನ್ನಡ ಸತ್ಯವೇದವು J.V. (BSI)

6 ಶಿಷ್ಟನ ತಲೆ ಆಶೀರ್ವಾದದ ನೆಲೆ; ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಶಿಷ್ಟನ ತಲೆ ಆಶೀರ್ವಾದದ ನೆಲೆ, ದುಷ್ಟನ ಬಾಯಿಗೆ ಬಲಾತ್ಕಾರವೇ ಮುಚ್ಚಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಜ್ಜನರ ತಲೆಯ ಮೇಲೆ ಆಶೀರ್ವಾದ; ದುರ್ಜನರ ಬಾಯಿ ಹಿಂಸಾಚಾರದ ಮುಚ್ಚಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಳ್ಳೆಯವನನ್ನು ಆಶೀರ್ವದಿಸುವಂತೆ ಜನರು ದೇವರನ್ನು ಪ್ರಾರ್ಥಿಸುವರು. ದುಷ್ಟನ ಮಾತುಗಳಲ್ಲಾದರೋ ಕುತಂತ್ರವೇ ಅಡಗಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:6
14 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಶುಭಗಳೆಲ್ಲಾ ನಿಮಗೆ ಪ್ರಾಪ್ತವಾಗುವವು. ಯಾವವಂದರೆ -


ನಂಬಿಗಸ್ತನು ಆಶೀರ್ವಾದಪೂರ್ಣನಾಗುವನು; ಧನವಂತನಾಗಲು ಆತುರಪಡುವವನು ದಂಡನೆಯನ್ನು ಹೊಂದದಿರನು.


ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವದು, ಸುಖಕರವಾದ ಆಶೀರ್ವಾದವೂ ಲಭಿಸುವದು.


ಶಿಷ್ಟನ ಬಾಯಿ ಜೀವದ ಬುಗ್ಗೆ; ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.


ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ; ಮಾರುವವನ ತಲೆಯ ಮೇಲೆ ಆಶೀರ್ವಾದ.


ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವದು.


ಅರಸನು ಅರಮನೆಯ ತೋಟದಿಂದ ತಾನು ದ್ರಾಕ್ಷಾರಸಪಾನ ಮಾಡಿದ ಗೃಹಕ್ಕೆ ತಿರಿಗಿ ಬಂದು ಎಸ್ತೇರಳು ಒರಗಿಕೊಳ್ಳುವ ಲೋಡಿನ ಮೇಲೆ ಹಾಮಾನನು ಬಿದ್ದುಕೊಂಡಿರುವದನ್ನು ಕಂಡು - ಇವನು ರಾಣಿಯನ್ನು ನನ್ನ ಮುಂದೆಯೇ ಅರಮನೆಯಲ್ಲಿ ಭಂಗಪಡಿಸಲೂ ಬೇಕೆಂದಿರುತ್ತಾನೋ ಅಂದನು. ಅರಸನ ಬಾಯಿಂದ ಈ ಮಾತು ಹೊರಟ ಕೂಡಲೇ ಸೇವಕರು ಹಾಮಾನನ ಮೋರೆಗೆ ಮುಸುಕು ಹಾಕಿದರು.


ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತನು; ಕೊಯ್ಲಿನಲ್ಲಿ ತೂಕಡಿಸುವವನು ನಾಚಿಕೆಗೆಟ್ಟವನು.


ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿವಿುತ್ತ ಅವಮಾನವು ನಿನ್ನನ್ನು ಕವಿಯುವದು; ನಿತ್ಯನಾಶನಕ್ಕೆ ಈಡಾಗುವಿ.


ಯೆಹೋವನು ದುಷ್ಟನ ಮನೆಯನ್ನು ಶಪಿಸುವನು, ನೀತಿವಂತರ ನಿವಾಸವನ್ನೋ ಆಶೀರ್ವದಿಸುವನು.


ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು