Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:8 - ಕನ್ನಡ ಸತ್ಯವೇದವು J.V. (BSI)

8 ಜ್ಞಾನಹೃದಯನು ಆಜ್ಞೆಗಳನ್ನು ವಹಿಸುವನು; ಹರಟೆಯ ಮೂರ್ಖನು ಕೆಡವಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜ್ಞಾನಹೃದಯನು ಆಜ್ಞೆಗಳನ್ನು ಪಾಲಿಸುವನು, ಹರಟೆಯ ಮೂರ್ಖನು ಕೆಡವಲ್ಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜ್ಞಾನಿಯು ಆಜ್ಞೆಗಳಿಗೆ ವಿಧೇಯನಾಗುತ್ತಾನೆ. ಮೂಢನಾದರೋ ವಾದಮಾಡಿ ತನಗೇ ತೊಂದರೆ ತಂದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; ಆದರೆ ಹರಟೆಯ ಮೂರ್ಖನು ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:8
15 ತಿಳಿವುಗಳ ಹೋಲಿಕೆ  

ತಿಳುವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ; ಪಶುಪ್ರಾಯನು ಗದರಿಕೆಯನ್ನು ದ್ವೇಷಿಸುತ್ತಾನೆ.


ನಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಲಕ್ಷಣವಾಗಿರುವ ಶಾಂತಗುಣದಿಂದ ಅದರ ಫಲವನ್ನು ತೋರಿಸಲಿ.


ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳುವಳಿಕೆಯನ್ನು ಪಡೆಯುವನು.


ಜ್ಞಾನಿಯು ಇವುಗಳನ್ನು ಕೇಳಿ ಹೆಚ್ಚಾದ ಪಾಂಡಿತ್ಯವನ್ನು ಹೊಂದುವನು, ವಿವೇಕಿಯು [ಮತ್ತಷ್ಟು] ಉಚಿತಾಲೋಚನೆಯುಳ್ಳವನಾಗುವನು.


ಜ್ಞಾನಿಯ ಮಾತು ಹಿತ; ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವದು.


ಶ್ರಮೆಯಿಂದ ಸಮೃದ್ಧಿ; ಹರಟೆಯಿಂದ ಕೊರತೆ.


ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ.


ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.


ದುಷ್ಟನು ತುಟಿಗಳ ದೋಷದಿಂದ ಬೋನಿಗೆ ಬೀಳುವನು; ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.


ಕಣ್ಣುವಿುಟಕಿಸುವವನು ಕಷ್ಟಕರನು; ಧೈರ್ಯದಿಂದ ಗದರಿಸುವವನು ಸಮಾಧಾನಕರನು.


ನನಗೆ ಜ್ಞಾವನ್ನು ದಯಪಾಲಿಸು; ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.


ಧರ್ಮನಿಂದಕನನ್ನು ಗದರಿಸಬೇಡ, ನಿನ್ನನ್ನು ಹಗೆಮಾಡುವನು; ಜ್ಞಾನವಂತನನ್ನು ಗದರಿಸಿದರೆ ನಿನ್ನನ್ನು ಪ್ರೀತಿಸುವನು.


ಜ್ಞಾನಿಗಳು ತಿಳಿದ ಸಂಗತಿಯನ್ನು ಹೊರಪಡಿಸುವದಿಲ್ಲ, ಮೂರ್ಖನ ಭಾಷಣ ಸಮೀಪನಾಶನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು