Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 10:9 - ಕನ್ನಡ ಸತ್ಯವೇದವು J.V. (BSI)

9 ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು; ವಕ್ರಮಾರ್ಗಿಯು ಬೈಲಿಗೆ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಒಳ್ಳೆಯವನೂ ಯಥಾರ್ಥನೂ ಆದ ಮನುಷ್ಯನು ಕ್ಷೇಮವಾಗಿರುವನು. ಮೋಸಮಾಡುವ ಕುಟಿಲ ಮನುಷ್ಯನಾದರೋ ಸಿಕ್ಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 10:9
17 ತಿಳಿವುಗಳ ಹೋಲಿಕೆ  

ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಪತನ.


ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವದಿಲ್ಲ; ಹೊರಪಡದ ರಹಸ್ಯವೂ ಇಲ್ಲ.


ಹಾಗೆಯೇ ಕೆಲವರ ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವರ ಸತ್ಕ್ರಿಯೆಗಳು ಅಪ್ರಸಿದ್ಧವಾಗಿದ್ದರೂ ಮರೆಯಾಗಿರಲಾರವು.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಆಗ ನೀನು ಎಡವದೆ ನಿನ್ನ ಮಾರ್ಗದಲ್ಲಿ ನಿರ್ಭಯವಾಗಿ ನಡೆಯುವಿ.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಯಥಾರ್ಥತ್ವವೂ ನನ್ನನ್ನು ಕಾಯಲಿ.


ವಕ್ರಹೃದಯನು ಶುಭವನ್ನು ಪಡೆಯನು; ಕೆಟ್ಟನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.


ತನ್ನ ಹಗೆಯನ್ನು ವಂಚನೆಯಿಂದ ಮರೆಮಾಜಿಕೊಂಡಿದ್ದರೂ ಅವನ ಕೆಟ್ಟತನವು ಸಭೆಯಲ್ಲಿ ಬೈಲಾಗುವದು.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವದಿಲ್ಲ, ಕೆಡುಕರನ್ನು ಕೈಹಿಡಿಯುವದಿಲ್ಲ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು