Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:3 - ಕನ್ನಡ ಸತ್ಯವೇದವು J.V. (BSI)

3 ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ; ವಂಚಕರಿಗೆ ವಕ್ರತೆಯು ನಾಶಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಜ್ಜನರಿಗೆ ಸರಳತೆ ಮಾರ್ಗದರ್ಶನ, ದುರ್ಜನರಿಗೆ ಅವರ ವಕ್ರತೆ ಸಂಹಾರಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ. ಕೆಡುಕರು ತಮ್ಮ ಮೋಸಕೃತ್ಯಗಳ ಮೂಲಕ ತಮ್ಮನ್ನೇ ನಾಶಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು; ಅಪನಂಬಿಗಸ್ತರ ಕಪಟತನವೇ ಅವರನ್ನು ನಾಶಪಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:3
13 ತಿಳಿವುಗಳ ಹೋಲಿಕೆ  

ಧರ್ಮವು ನಿರ್ದೋಷಿಯನ್ನು ಕಾಯುವದು; ಅಧರ್ಮವು ದೋಷಿಯನ್ನು ಕೆಡವಿಬಿಡುವದು.


ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಪತನ.


ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು ಯೆಹೋವನ ಮೇಲೆ ಕುದಿಯುವನು.


ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.


ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಯಥಾರ್ಥತ್ವವೂ ನನ್ನನ್ನು ಕಾಯಲಿ.


ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.


ಅಧರ್ಮವನ್ನು ಹೆಚ್ಚಾಗಿ ಆಚರಿಸದಿರು; ಬುದ್ಧಿಹೀನನಾಗಿರಬೇಡ; ಏಕೆ ಅಕಾಲ ಮರಣವನ್ನು ಹೊಂದುವಿ?


ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವದು; ದೋಷಿಯು ತನ್ನ ದೋಷದಿಂದಲೇ ಬಿದ್ದುಹೋಗುವನು.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವದು.


ದುಷ್ಟರಾದರೋ ದೇಶದೊಳಗಿಂದ ಕೀಳಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.


ಯೆಹೋವನ ಕಣ್ಣು ತಿಳುವಳಿಕೆಗೆ ಕಾವಲು; ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.


ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು