Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:30 - ಕನ್ನಡ ಸತ್ಯವೇದವು J.V. (BSI)

30 ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನೀತಿವಂತನ ಕಾರ್ಯಗಳು ಜೀವವುಳ್ಳ ಮರಗಳಂತಿವೆ. ಜ್ಞಾನಿಯು ಆತ್ಮಗಳನ್ನು ಗೆದ್ದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:30
13 ತಿಳಿವುಗಳ ಹೋಲಿಕೆ  

ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು; ಬಹು ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.


ಅವರಿಗೆ ಆತನು - ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು ಎಂದು ಹೇಳುತ್ತಲೇ


ಸಂತೈಸುವ ನಾಲಿಗೆ ಜೀವವೃಕ್ಷವು; ಬಲಾತ್ಕರಿಸುವ ನಾಲಿಗೆ ಮನಮುರಿಯುವದು.


ಜ್ಞಾನವು ತನ್ನನ್ನು ಹಿಡಿದುಕೊಳ್ಳುವವರಿಗೆ ಜೀವದ ಮರವಾಗಿದೆ; ಅದನ್ನು ಅವಲಂಬಿಸುವ ಪ್ರತಿಯೊಬ್ಬನೂ ಧನ್ಯನು.


ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.


ಕೆಡುಕರ ಕೊಳ್ಳೆ ದುಷ್ಟರಿಗೆ ಇಷ್ಟ; ಶಿಷ್ಟರ ಬುಡ ಫಲದಾಯಕ.


ಸತ್ಯಸಾಕ್ಷಿಯು ಪ್ರಾಣರಕ್ಷಕ; ಸುಳ್ಳುಸಾಕ್ಷಿಯು ವಂಚಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು