Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:31 - ಕನ್ನಡ ಸತ್ಯವೇದವು J.V. (BSI)

31 ಶಿಷ್ಟನೇ ಭೂವಿುಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ ದುಷ್ಟನೂ ಪಾಪಿಯೂ ಅನುಭವಿಸುವರು ಎಂದು ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಶಿಷ್ಟರು ಭೂಮಿಯ ಮೇಲೆ ಪ್ರತಿಫಲವನ್ನು ಹೊಂದುವುದಾದರೆ ಕೆಡುಕರು ಸಹ ತಮಗೆ ಬರತಕ್ಕ ದಂಡನೆಯನ್ನು ಹೊಂದುವುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ, ದುಷ್ಟರು ಮತ್ತು ಪಾಪಿಗಳು ಎಷ್ಟೋ ಹೆಚ್ಚಾಗಿ ತಮ್ಮ ಫಲವನ್ನು ಹೊಂದುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:31
15 ತಿಳಿವುಗಳ ಹೋಲಿಕೆ  

ಇಗೋ, ನನ್ನ ಹೆಸರುಗೊಂಡಿರುವ ಪಟ್ಟಣದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಂಡೀರೋ? ಆಗುವದೇ ಇಲ್ಲ. ಖಡ್ಗವೇ, ಭೂನಿವಾಸಿಗಳನ್ನೆಲ್ಲ ಸಂಹರಿಸಲಿಕ್ಕೆ ಬಾ ಎಂದು ಕೂಗುವೆನು. ಇದು ಸೇನಾಧೀಶ್ವರನಾದ ಯೆಹೋವನೆಂಬ ನನ್ನ ನುಡಿ.


ಅಮಂಗಳವು ಪಾಪಿಗಳನ್ನು ಹಿಂಬಾಲಿಸುವದು; ಮಂಗಳವು ಸಜ್ಜನರಿಗೆ ಪ್ರತಿಫಲವಾಗುವದು.


ದೇವರ ಮನುಷ್ಯನು ಸ್ವಲ್ಪ ದೂರ ಹೋದನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.


ಯೆಹೋವನು ನನ್ನ ನೀತಿಗೆ ಸರಿಯಾಗಿ ಮೇಲು ಮಾಡಿದನು; ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.


ಆದದರಿಂದ ನಾನು ನೀತಿವಂತನೂ ನಿರಪರಾಧಿಯೂ ಎಂದು ನೋಡಿ ಯೆಹೋವನು ತಕ್ಕ ಪ್ರತಿಫಲವನ್ನು ಕೊಟ್ಟನು.


ತಿಳುವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ; ಪಶುಪ್ರಾಯನು ಗದರಿಕೆಯನ್ನು ದ್ವೇಷಿಸುತ್ತಾನೆ.


ಮೂಢರನ್ನೂ ತಿರುಗಾಡುವವರನ್ನೂ ಕೂಲಿಗೆ ಕರೆಯುವವನು ಯಾರಿಗೋ ತಗಲಲಿ ಎಂದು ಬಾಣವನ್ನು ಎಸೆಯುವವನ ಹಾಗೆ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲವನ್ನೂ ತಿನ್ನಿಸಿ ಸೊಕ್ಕಿದವರ ಸೊಕ್ಕನ್ನು ಅಡಗಿಸಿ ಭಯಂಕರರ ಹೆಮ್ಮೆಯನ್ನು ತಗ್ಗಿಸಿ


ಇಸ್ರಾಯೇಲ್ಯರು ನನ್ನನ್ನು ತೊರೆದಾಗ ನನ್ನಿಂದಗಲಿ ತಮ್ಮ ಬೊಂಬೆಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.


ಜನರೂ ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು. ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು