Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:4 - ಕನ್ನಡ ಸತ್ಯವೇದವು J.V. (BSI)

4 ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಜನರಿಗೆ ನ್ಯಾಯತೀರ್ಪು ಮಾಡುವ ದಿನದಲ್ಲಿ, ಹಣದಿಂದ ಯಾವ ಲಾಭವೂ ಇಲ್ಲ. ಆದರೆ ನೀತಿಯು ಜನರನ್ನು ಮರಣದಿಂದ ಕಾಪಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:4
15 ತಿಳಿವುಗಳ ಹೋಲಿಕೆ  

ದುರ್ದ್ರವ್ಯವು ವ್ಯರ್ಥ; ಧರ್ಮವು ಮೃತ್ಯುವಿನಿಂದ ರಕ್ಷಕ.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಆಗ ಯೆಹೋವನು ನೋಹನಿಗೆ - ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿನವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿ ನಡೆಯುವದನ್ನು ನೋಡಿದ್ದೇನೆ.


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧಪದಾರ್ಥದಂತಿರುವದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿವಿಘ್ನವಾಗಿತ್ತು.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು?


ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳುವದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವದು ಮತ್ತೂ ನಿಶ್ಚಯವಲ್ಲವೇ.


ಧರ್ಮಮಾರ್ಗದಿಂದ ಜೀವಲಾಭವು; ಆ ಸುಪಥಮಾರ್ಗವು ಅಮರಣವೇ.


ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ, ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.


ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು