Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:5 - ಕನ್ನಡ ಸತ್ಯವೇದವು J.V. (BSI)

5 ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವದು; ದೋಷಿಯು ತನ್ನ ದೋಷದಿಂದಲೇ ಬಿದ್ದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿರ್ದೋಷಿಯ ಮಾರ್ಗ ಸರಾಗ; ದುಷ್ಟತನದಿಂದ ದುರುಳನ ಪತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀತಿವಂತನು ಯಥಾರ್ಥನಾಗಿದ್ದರೆ ಅವನ ಜೀವನವು ಸರಾಗವಾಗಿರುವುದು. ಆದರೆ ಕೆಡುಕನು ತನ್ನ ಕೆಟ್ಟಕಾರ್ಯಗಳಿಂದ ನಾಶವಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಷ್ಕಳಂಕರ ನೀತಿಯು ಅವರ ಮಾರ್ಗವನ್ನು ಸರಾಗ ಮಾಡುವುದು; ಆದರೆ ದುಷ್ಟರು ತಮ್ಮ ದುಷ್ಟತ್ವದಿಂದಲೇ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:5
19 ತಿಳಿವುಗಳ ಹೋಲಿಕೆ  

ದುಷ್ಟನ ದುಷ್ಕೃತ್ಯಗಳೇ ಅವನನ್ನು ಆಕ್ರವಿುಸುವವು, ಅವನ ಪಾಪಪಾಶಗಳೇ ಅವನನ್ನು ಬಂಧಿಸುವವು.


ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ; ವಂಚಕರಿಗೆ ವಕ್ರತೆಯು ನಾಶಕ.


ನಿನ್ನ ಎಲ್ಲಾ ನಡವಳಿಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣವು ಅಗ್ನಿಗೆ ಆಹುತಿಯಾದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತವಾಯಿತೆಂದು ಕಳವಳಗೊಂಡರು.


ಯಾವನೂ ದುಷ್ಟತನದಿಂದ ಸ್ಥಿರನಾಗನು; ಶಿಷ್ಟನು ಯಾವಾಗಲೂ ದೃಢಮೂಲನೇ.


ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ; ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.


ಅವನ ಬಲವುಳ್ಳ ಹೆಜ್ಜೆಗಳಿಗೆ ಇಕ್ಕಟ್ಟಾಗುವದು, ಅವನ ಆಲೋಚನೆಯೇ ಅವನನ್ನು ಕೆಡವಿಹಾಕುವದು.


ಇವರಾದರೋ ಸ್ವರಕ್ತವನ್ನು ಸುರಿಸಿಕೊಳ್ಳುವದಕ್ಕೆ ಹೊಂಚುಹಾಕುತ್ತಾರೆ, ಸ್ವಜೀವವನ್ನು ತೆಗೆದುಕೊಳ್ಳುವದಕ್ಕೆ ಕಾದಿರುತ್ತಾರೆ.


ಧರ್ಮವು ನಿರ್ದೋಷಿಯನ್ನು ಕಾಯುವದು; ಅಧರ್ಮವು ದೋಷಿಯನ್ನು ಕೆಡವಿಬಿಡುವದು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಸೋಮಾರಿಯ ದಾರಿ ಮುಳ್ಳುಬೇಲಿ; ಯಥಾರ್ಥವಂತನ ಮಾರ್ಗ ರಾಜಮಾರ್ಗ.


ಸನ್ಮಾರ್ಗಿಗೆ ಉದ್ಧಾರ, ವಕ್ರಮಾರ್ಗಿಗೆ ತಟ್ಟನೆ ಪತನ.


ಶಿಷ್ಟನ ಮಾರ್ಗವು ನೇರವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ.


ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧಸಾಕ್ಷಿಯಾಗಿದೆ; ಇಸ್ರಾಯೇಲೂ ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು