Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 11:7 - ಕನ್ನಡ ಸತ್ಯವೇದವು J.V. (BSI)

7 ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವದು; ಬಲದ ಮೇಲಣ ನಂಬಿಕೆಯು ಬಿದ್ದುಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದುರುಳನೊಂದಿಗೆ ಸಾಯುವುದು ಅವನ ನಿರೀಕ್ಷೆ; ಅಳಿವುದು ಸಾಮರ್ಥ್ಯದ ಮೇಲಿಟ್ಟ ಅವನ ನಂಬಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳೆಲ್ಲಾ ನಾಶವಾಗುತ್ತವೆ. ಅವನ ಅಪೇಕ್ಷೆಗಳೆಲ್ಲಾ ಕೊನೆಗೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವುವು; ತನ್ನ ಬಲದಿಂದ ನಿರೀಕ್ಷಿಸಿದ್ದೆಲ್ಲವೂ ಇಲ್ಲದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 11:7
11 ತಿಳಿವುಗಳ ಹೋಲಿಕೆ  

ಶಿಷ್ಟನ ನಂಬಿಕೆಗೆ ಆನಂದವು ಫಲ; ದುಷ್ಟನ ನಿರೀಕ್ಷೆ ನಿಷ್ಫಲ.


ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬದೇ ಅವರ ಆಶೆ.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಅವನ ಉಸಿರು ಹೋಗಲು ಮಣ್ಣಿಗೆ ಸೇರುತ್ತಾನೆ; ಅವನ ಸಂಕಲ್ಪಗಳೆಲ್ಲಾ ಅದೇ ದಿನದಲ್ಲಿ ಹಾಳಾಗುವವು.


ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ.


ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ಲಯಹೊಂದುವನು. ದುಷ್ಟರ ನಿರೀಕ್ಷೆಯು ಭಂಗವಾಗುವದು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು; ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.


ಯೆಹೋವನು ಸನ್ಮಾರ್ಗಿಗೆ ಆಶ್ರಯ, ಕೆಡುಕನಿಗೆ ನಾಶನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು